Social Welfare Department 2020: ಸಮಾಜ ಕಲ್ಯಾಣ ಇಲಾಖೆ ನಡೆಸುವ ಉಚಿತ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

2020-21ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳನ್ನು ಯು.ಪಿ.ಎಸ್‌.ಸಿ/ಕೆ.ಎ.ಎಸ್/ಗ್ರೂಪ್ ಎ,ಬಿ (ಜಡ್ಜ್ & ಎನ್‌.ಡಿ.ಎ ಪರೀಕ್ಷೆಗಳಿಗೆ) & ಸಿ/ಬ್ಯಾಂಕಿಂಗ್ ಮತ್ತು ಎಸ್‌.ಎಸ್‌.ಸಿ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್‌-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 31,2020. ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ಇಲಾಖೆಯ ವೆಬ್‌ಸೈಟ್‌ ಅನ್ನು ಚೆಕ್ ಮಾಡಿಕೊಳ್ಳಬಹುದು.

ಸಮಾಜ ಕಲ್ಯಾಣ ಇಲಾಖೆಯಿಂದ ಉಚಿತ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಯು.ಪಿ.ಎಸ್‌.ಸಿ /ಕೆ.ಎ.ಎಸ್ /ಗ್ರೂಪ್ ಎ.ಬಿ (ಜಡ್ಜ್ ಮತ್ತು ಎನ್‌.ಡಿ.ಎ ಪರೀಕ್ಷೆಗಳಿಗೆ) & ಸಿ / ಬ್ಯಾಂಕಿಂಗ್ /ಎಸ್‌.ಎಸ್‌.ಸಿ ಮತ್ತು ಆರ್‌.ಆರ್‌.ಬಿ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ವಯ ಮೆರಿಟ್ ಆಧಾರದ ಮೇಲೆ ತರಬೇತಿಗೆ ಆಯ್ಕೆ ಮಾಡಲಾಗುತ್ತದೆ. ಸದರಿ ಅಭ್ಯರ್ಥಿಗಳಿಗೆ ಶಿಷ್ಯವೇತನವನ್ನು ಸರ್ಕಾರದಿಂದ ಬಂದ ಕೂಡಲೇ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಾಕಲಾಗುವುದು.

 

ವಿವಿಧ ಪರೀಕ್ಷೆಗಳ ಪೂರ್ವಭಾವಿ ತರಬೇತಿಯ ಅವಧಿ:

ಯು.ಪಿ.ಎಸ್‌.ಸಿ- 5 ತಿಂಗಳು
ಕೆ.ಎ.ಎಸ್ -4 ತಿಂಗಳು
ಗ್ರೂಪ್ ಸಿ- 3 ತಿಂಗಳು
ಬ್ಯಾಂಕಿಂಗ್ -3 ತಿಂಗಳು
ಎಸ್‌.ಎಸ್‌.ಸಿ-3 ತಿಂಗಳು
ಆರ್‌.ಆರ್‌.ಬಿ- 3 ತಿಂಗಳು

ವಯೋಮಿತಿ ಎಷ್ಟಿರಬೇಕು:

ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವಿದ್ಯಾರ್ಹತೆ ಏನಿರಬೇಕು:

ಯು.ಪಿ.ಎಸ್‌.ಸಿ :

ಅಭ್ಯರ್ಥಿಯು ಪದವಿಯಲ್ಲಿ ಉತ್ತೀರ್ಣರಾಗಿದ್ದು, ಶೇ.55ಕ್ಕಿಂತ ಹೆಚ್ಚು ಅಂಕಗಳಿಸಿದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಕೆ.ಎ.ಎಸ್/ಗ್ರೂಪ್ -ಸಿ/ ಬ್ಯಾಂಕಿಂಗ್/ಆರ್‌ಆರ್‌ಬಿ/ಎಸ್‌ಎಸ್‌ಸಿ:

ಅಭ್ಯರ್ಥಿಯು ಪದವಿಯಲ್ಲಿ ಉತ್ತೀರ್ಣರಾಗಿದ್ದು, ಶೇ.50 ಕ್ಕಿಂತ ಹೆಚ್ಚು ಅಂಕಗಳಿಸಿದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಆಯ್ಕೆ ವಿಧಾನ:

ಯುಪಿಎಸ್ಸಿ/ಕೆಎಎಸ್/ಗ್ರೂಪ್-ಸಿ/ಬ್ಯಾಂಕಿಂಗ್/ಎಸ್‌ಎಸ್‌ಸಿ ಮತ್ತು ಆರ್‌ಆರ್‌ಬಿಒ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಕೋವಿಡ್-19 ಹಿನ್ನೆಲೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ ಆಯ್ಕೆ ಮಾಡಲು ಸಾಧ್ಯವಾಗದ ಕಾರಣ ಪದವಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸಲು ವೆಬ್‌ಸೈಟ್‌ ವಿಳಾಸ: https://sw.kar.nic.in/index.aspx

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31/12/2020ರ ಸಂಜೆ 5:30ರ ವರೆಗೆ

ಸೂಚನೆ:

ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಗೆ ಶಿಷ್ಯವೇತನವನ್ನು ಸರ್ಕಾರದಿಂದ ಮಂಜೂರಾದ ದರದಲ್ಲಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಹಾಜರಾತಿಯನ್ವಯ ವರ್ಗಾಯಿಸಲಾಗುವುದು.

ಅಭ್ಯರ್ಥಿಯ ಕುಟುಂಬದ ಆದಾಯ 5,00 ಲಕ್ಷಗಳ ಒಳಗಿರಬೇಕು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಖಾಸಗಿ ತರಬೇತಿ ಸಂಸ್ಥೆಗಳಿಂದ ಉಚಿತವಾಗಿ ತರಬೇತಿಯನ್ನು ನೀಡಲಾಗುವುದು ಹಾಗೂ ತರಬೇತಿ ಅವಧಿಯಲ್ಲಿ ಯಾವುದೇ ವಸತಿ ಸೌಲಭ್ಯವನ್ನು ಇಲಾಖೆಯು ನೀಡುವುದಿಲ್ಲ. ಸರ್ಕಾರದ ಆದೇಶ ಪ್ರಕಾರ ಮಾಸಿಕ ಶಿಷ್ಯವೇತನ ಪಾವತಿಸಲಾಗುವುದು.

ಕೋವಿಡ್-19 ಹಿನ್ನೆಲೆಯಲ್ಲಿ 2020-21ನೇ ಸಾಲಿನ ತರಬೇತಿಯನ್ನು ಆನ್‌ಲೈನ್ ಮೂಲಕ ನೀಡಲಾಗುತ್ತಿದೆ. ರಾಜ್ಯ ಸರ್ಕಾರ ಆಫ್‌ ಲೈನ್ ಗೆ ಅವಕಾಶ ನೀಡಿದ ನಂತರ ಆಫ್‌ಲೈನ್ ತರಬೇತಿಯನ್ನು ನೀಡಲಾಗುತ್ತದೆ.

ಅಭ್ಯರ್ಥಿಗಳು ಈ ಬಗೆಗಿನ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Social welfare department 2020 invited applications for pre-examination training for upsc, kas. SSC, Bank/RRB And Group C exams. Interested candidates can apply before December 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X