Social Welfare Department 2022: ಸಮಾಜ ಕಲ್ಯಾಣ ಇಲಾಖೆ ನಡೆಸುವ ಉಚಿತ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

2022-23ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿ/ ಪಂಗಡಗಳ/ ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತ ಅಭ್ಯರ್ಥಿಗಳಿಗೆ ಯು.ಪಿ.ಎಸ್‌.ಸಿ/ಕೆ.ಎ.ಎಸ್/ಗ್ರೂಪ್ ಸಿ/ಬ್ಯಾಂಕಿಂಗ್/ಎಸ್‌.ಎಸ್‌.ಸಿ/ಆರ್‌.ಆರ್.ಬಿ ಮತ್ತು ನ್ಯಾಯಾಂಗ ಸೇವಾ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್‌-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

 
ಸಮಾಜ ಕಲ್ಯಾಣ ಇಲಾಖೆಯಿಂದ ಉಚಿತ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಯು.ಪಿ.ಎಸ್‌.ಸಿ /ಕೆ.ಎ.ಎಸ್ /ಗ್ರೂಪ್ ಸಿ / ಬ್ಯಾಂಕಿಂಗ್ /ಎಸ್‌.ಎಸ್‌.ಸಿ/ ಆರ್‌.ಆರ್‌.ಬಿ ಮತ್ತು ನ್ಯಾಯಾಂಗ ಸೇವಾ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತ ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರವರ ಮೂಲಕ ಸಾಮಾನ್ಯ ಪ್ರವೇಶ ನಡೆಸಿ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ತರಬೇತಿಗೆ ಆಯ್ಕೆ ಮಾಡಲಾಗುತ್ತದೆ. ಸದರಿ ಅಭ್ಯರ್ಥಿಗಳಿಗೆ ಶಿಷ್ಯವೇತನವನ್ನು ಸರ್ಕಾರದಿಂದ ಬಂದ ಕೂಡಲೇ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಹಾಕಲಾಗುವುದು ಮತ್ತು ತರಬೇತಿ ವೆಚ್ಚವನ್ನು ತರಬೇತಿ ಸಂಸ್ಥೆಗಳಿಗೆ ಪಾವತಿಸಲಾಗುವುದು.

ವಿವಿಧ ಪರೀಕ್ಷೆಗಳ ಪೂರ್ವಭಾವಿ ತರಬೇತಿಯ ಅವಧಿಯ ವಿವರಗಳು :

ಯು.ಪಿ.ಎಸ್‌.ಸಿ - 9 ತಿಂಗಳು
ಕೆ.ಎ.ಎಸ್ - 7 ತಿಂಗಳು
ಗ್ರೂಪ್ ಸಿ - 3 ತಿಂಗಳು
ಬ್ಯಾಂಕಿಂಗ್ -3 ತಿಂಗಳು
ಎಸ್‌.ಎಸ್‌.ಸಿ -3 ತಿಂಗಳು
ಆರ್‌.ಆರ್‌.ಬಿ - 3 ತಿಂಗಳು

ವಯೋಮಿತಿ ಎಷ್ಟಿರಬೇಕು :

ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವಿದ್ಯಾರ್ಹತೆ ಏನಿರಬೇಕು :

ಯು.ಪಿ.ಎಸ್‌.ಸಿ :

ಅಭ್ಯರ್ಥಿಯು ಪದವಿಯಲ್ಲಿ ಉತ್ತೀರ್ಣರಾಗಿದ್ದು, ಶೇ.55ಕ್ಕಿಂತ ಹೆಚ್ಚು ಅಂಕಗಳಿಸಿದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಕೆ.ಎ.ಎಸ್/ಗ್ರೂಪ್ -ಸಿ/ ಬ್ಯಾಂಕಿಂಗ್/ಆರ್‌ಆರ್‌ಬಿ/ಎಸ್‌ಎಸ್‌ಸಿ:

ಅಭ್ಯರ್ಥಿಯು ಪದವಿಯಲ್ಲಿ ಉತ್ತೀರ್ಣರಾಗಿದ್ದು, ಶೇ.50 ಕ್ಕಿಂತ ಹೆಚ್ಚು ಅಂಕಗಳಿಸಿದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ನ್ಯಾಯಾಂಗ ಸೇವೆ :
ಪದವಿಯಲ್ಲಿ ಶೇ.45 ಕ್ಕಿಂತ ಹೆಚ್ಚು ಅಂಕಗಳಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

 

ಆಯ್ಕೆ ವಿಧಾನ :

ಅಭ್ಯರ್ಥಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆ.ಇ.ಎ) ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆನ್‌ಲೈನ್ ಕೌನ್ಸೆಲಿಂಗ್ ಮೂಲಕ ಅಭ್ಯರ್ಥಿಗಳನ್ನು ತರಬೇತಿ ಸಂಸ್ಥೆಗೆ ನಿಯೋಜಿಸಲಾಗುತ್ತದೆ.

ಶಿಷ್ಯವೇತನದ ವಿವರ :

ಯು.ಪಿ.ಎಸ್.ಸಿ ತರಬೇತಿ
ದೆಹಲಿ : 10,000
ಹೈದರಾಬಾದ್ : 8,000
ಬೆಂಗಳೂರು : 6,000
ಇತರೆ ಸ್ಥಳಗಳು : 5,000

ಕೆ.ಎ.ಎಸ್ - 4,000
ಬ್ಯಾಂಕಿಂಗ್/ಗ್ರೂಪ್-ಸಿ/ಎಸ್.ಎಸ್.ಸಿ/ಆರ್.ಆರ್.ಬಿ/ನ್ಯಾಯಾಂಗ ಸೇವೆ ತರಬೇತಿ - 3,000

ಸರ್ಕಾರದ ಆದೇಶದ ಪ್ರಕಾರ ಶಿಷ್ಯವೇತನವನ್ನು ಮೂರು ಮಾಹೆಗೆ ಒಂದು ಬಾರಿ ತರಬೇತಿ ಸಂಸ್ಥೆಯವರು ಸಲ್ಲಿಸುವ ಹಾಜರಾತಿಯನ್ವಯ ಪಾವತಿಸಲಾಗುವುದು. ಆದರೆ ತರಬೇತಿ ಅವಧಿಯಲ್ಲಿ ಯಾವುದೇ ವಸತಿ ಸೌಲಭ್ಯವನ್ನು ಇಲಾಖಾವತಿಯಿಂದ ನೀಡಲಾಗುವುದಿಲ್ಲ.

ಅರ್ಜಿ ಸಲ್ಲಿಸಲು ವೆಬ್‌ಸೈಟ್‌ ವಿಳಾಸ: https://sw.kar.nic.in/index.aspx

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20.09.2022

ಸೂಚನೆ:

ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಗೆ ಶಿಷ್ಯವೇತನವನ್ನು ಸರ್ಕಾರದಿಂದ ಮಂಜೂರಾದ ದರದಲ್ಲಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಹಾಜರಾತಿಯನ್ವಯ ವರ್ಗಾಯಿಸಲಾಗುವುದು.

ಅಭ್ಯರ್ಥಿಯ ಕುಟುಂಬದ ಆದಾಯ 5,00 ಲಕ್ಷಗಳ ಒಳಗಿರಬೇಕು.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Social welfare department 2022 invited applications for pre-examination training for UPSC,KAS, SSC, Bank/RRB, Law service And Group C exams.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X