ಸೌತ್ ಇಂಡಿಯನ್ ಬ್ಯಾಂಕ್ ಪ್ರೊಬೆಷನರಿ ಅಧಿಕಾರಿ ಮತ್ತು ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಆನ್‌ಲೈನ್ ಪರೀಕ್ಷೆಗೆ ಇದೀಗ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಸೌತ್ ಇಂಡಿಯನ್ ಬ್ಯಾಂಕ್ 160 ಪ್ರೊಬೆಷನರಿ ಅಧಿಕಾರಿ ಮತ್ತು 385 ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಲು ಜೂನ್ 30,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ಪ್ರೊಬೆಷನರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಜುಲೈ 25 ಕೊನೆಯ ದಿನವಾಗಿರುತ್ತದೆ ಮತ್ತು ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಿಂದ ಜುಲೈ 26,2019 ರೊಳಗೆ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.
ಸೌತ್ ಇಂಡಿಯನ್ ಬ್ಯಾಂಕ್ ಪ್ರೊಬೆಷನರಿ ಅಧಿಕಾರಿ ಮತ್ತು ಕ್ಲರ್ಕ್ ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಸೌತ್ ಇಂಡಿಯನ್ ಬ್ಯಾಂಕ್ ನ ಅಧಿಕೃತ ವೆಬ್ ಸೈಟ್ https://www.southindianbank.com/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಕಾಣಿಸುವ "Careers" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ "Recruitment of probationary clerks" ಅಥವಾ "Recruitment of probationary officers" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Download Call Letter" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ನಂತರ ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ನಿಮ್ಮ ಜನ್ಮ ದಿನಾಂಕ / ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 6: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ
ಸ್ಟೆಪ್ 7: ನಂತರ ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಕ್ಲರ್ಕ್ ಹುದ್ದೆಗಳ ಪರೀಕ್ಷಾ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ
ಕ್ಲಿಕ್ ಮಾಡಿ ಮತ್ತು ಪ್ರೊಬೆಷನರಿ ಅಧಿಕಾರಿ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ


Click it and Unblock the Notifications











