ಸಿಬ್ಬಂದಿ ನೇಮಕಾತಿ ಆಯೋಗದ ಸಿಎಚ್‌ಎಸ್‌ಎಲ್‌ ಹುದ್ದೆಗಳ ಪರೀಕ್ಷಾ ಕೀ- ಉತ್ತರ ಪ್ರಕಟ

ಸಿಬ್ಬಂದಿ ನೇಮಕಾತಿ ಆಯೋಗ (ಎಸ್‌ಎಸ್‌ಸಿ)ವು ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (ಸಿಎಚ್‌ಎಸ್‌ಎಲ್‌) ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಕೀ ಉತ್ತರವನ್ನು ಚೆಕ್‌ ಮಾಡಿಕೊಳ್ಳಬಹುದು.

ಪರೀಕ್ಷಾ ಕೀ-ಉತ್ತರ ಬಿಡುಗಡೆ

ಸಿಬ್ಬಂದಿ ನೇಮಕಾತಿ ಆಯೋಗವು ಲೋಯರ್ ಡಿವಿಷನಲ್ ಕ್ಲರ್ಕ್, ಪೋಸ್ಟಲ್ ಅಸಿಸ್ಟೆಂಟ್ ಮತ್ತು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಏಪ್ರಿಲ್ 5,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆಯೋಗವು ಜುಲೈ 1,2019 ರಿಂದ ಜುಲೈ 11,2019ರ ವರೆಗೆ ರಾಷ್ಟ್ರದ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿದ್ದು ಇದೀಗ ಸರಿ ಉತ್ತರಗಳನ್ನು (ಕೀ ಉತ್ತರ) ಪ್ರಕಟ ಮಾಡಲಾಗಿದೆ.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://ssc.nic.in/ ಗೆ ಭೇಟಿ ನೀಡಿ ಕೀ ಉತ್ತರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ವಿಷಯವಾರು ಪ್ರಶ್ನೆಪತ್ರಿಕೆ ಮತ್ತು ಅದಕ್ಕೆ ಸಂಬಂಧಿಸಿದ ತಾತ್ಕಾಲಿಕ ಸರಿ ಉತ್ತರಗಳನ್ನು ಮಾಸ್ಟರ್ ಪ್ರಶ್ನೆ ಪತ್ರಿಕೆಯೊಂದಿಗೆ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಾತ್ಕಾಲಿಕ ಸರಿ ಉತ್ತರಗಳನ್ನು ತಮ್ಮ ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆ ಸಂಖ್ಯೆಗೆ ಅನುಗುಣವಾಗಿ ಪರಿಶೀಲಿಸಲು ಸೂಚಿಸಿದೆ. ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಏನಾದರು ಆಕ್ಷೇಪಣೆಗಳಿದ್ದಲ್ಲಿ ಜುಲೈ 27,2019ರೊಳಗೆ ನಿಮ್ಮ ಆಕ್ಷೇಪಣೆಯನ್ನು ನೀಡಲಾಗಿರುವ ಲಿಂಕ್ ಮೂಲಕ ಸಲ್ಲಿಸಬಹುದು. ಆಕ್ಷೇಪಣೆ ಸಲ್ಲಿಸಲಿರುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ.

ಕೀ ಉತ್ತರಗಳನ್ನು ಪಡೆಯುವ ವಿಧಾನ:

ಸ್ಟೆಪ್ 1: ಅಭ್ಯರ್ಥಿಗಳು ಎಸ್‌ಎಸ್‌ಸಿಯ ಅಧಿಕೃತ ವೆಬ್‌ಸೂಟ್ https://ssc.nic.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಮ್‌ ಪೇಜ್‌ನಲ್ಲಿ ಲಭ್ಯವಿರುವ "Tentative Answer keys of CHSL level examination" ಎಂಬ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.
ಸ್ಟೆಪ್ 3: ಹೊಸ ಪುಟ ತೆರೆದುಕೊಳ್ಳುತ್ತದೆ. ಅದರಲ್ಲಿ ಕೀ ಉತ್ತರಗಳು ಮತ್ತು ರೆಸ್ಪಾನ್ಸ್‌ ಪ್ರತಿಯಿರುವ ಲಿಂಕ್‌ ಸಿಗುತ್ತದೆ.
ಸ್ಟೆಪ್ 4: ನಂತರ Click Here ಎಂಬ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.
ಸ್ಟೆಪ್ 5: ಅಭ್ಯರ್ಥಿಗಳು ನಿಮ್ಮ ಯೂಸರ್ ಐಡಿ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 6: ನಂತರ ಕೀ-ಉತ್ತರ ಡೌನ್‌ಲೋಡ್ ಮಾಡಲು ಕೀ-ಉತ್ತರ ಮತ್ತು ರೆಸ್ಪಾನ್ಸ್ ಶೀಟ್‌ನ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.

ಪ್ರಕಟಿಸಿರುವ ತಾತ್ಕಾಲಿಕ ಸರಿ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಆಧಾರ ಸಹಿತ ಆಕ್ಷೇಪಣೆಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಜುಲೈ 27,2019ರೊಳಗೆ ಸಲ್ಲಿಸಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
SSC CHSL posts exams answer key released on official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+