SSC CGL Skill Test Admit Card 2022 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಕೌಶಲ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಎಸ್‌ಸಿ ಸಿಜಿಎಲ್ ಕೌಶಲ್ಯ ಪರೀಕ್ಷೆಯ ಪ್ರವೇಶ ಪತ್ರ ಔಟ್

ಸಿಬ್ಬಂದಿ ನೇಮಕಾತಿ ಆಯೋಗವು ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಡಿಸೆಂಬರ್ 29,2020 ರಿಂದ ಜನವರಿ 31,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಜನವರಿ 1,2021ರ ಅನ್ವಯ ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಆಭ್ಯರ್ಥಿಗಳು ಅರ್ಜಿ ಹಾಕಲು ಅರ್ಹರಾಗಿದ್ದರು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 1,51,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.

ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಟಯರ್ I , ಟಯರ್ II , ಟಯರ್ III ಮತ್ತು ಟಯರ್ IV ಪರೀಕ್ಷೆಗಳ ಮೂಲಕ ಮತ್ತು ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಇದೀಗ ಕೌಶಲ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದ್ದು, ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎಂದು ತಿಳಿಯಲು ಮುಂದೆ ಓದಿ.

ಎಸ್‌ಎಸ್‌ಸಿ ಸಿಜಿಎಲ್ ಕೌಶಲ್ಯ ಪರೀಕ್ಷೆಯ ಪ್ರವೇಶ ಪತ್ರ ಔಟ್

ಎಸ್‌ಎಸ್‌ಸಿ ಸಿಜಿಎಲ್ ಕೌಶಲ್ಯ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ? :

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಎಸ್‌ಎಸ್‌ಸಿ ಅಧಿಕೃತ ವೆಬ್‌ಸೈಟ್ https://ssc.nic.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಆಯ್ಕೆಯ ವೆಬ್‌ಸೈಟ್ ಗೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ಎಸ್‌ಎಸ್‌ಸಿ ಸಿಜಿಎಲ್ ಕೌಶಲ್ಯ ಪರೀಕ್ಷೆಯ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಅಭ್ಯರ್ಥಿಗಳು ನಿಮ್ಮ ರೋಲ್ ನಂಬರ್/ರಿಜಿಸ್ಟ್ರೇಶನ್ ನಂಬರ್ ಅಥವಾ ಅಭ್ಯರ್ಥಿಗಳ ಹೆಸರು/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 6: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SSC released CGL skill test 2022 admit card. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+