ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಪರೀಕ್ಷೆ 2021ರ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳ ಟಯರ್ I ಪರೀಕ್ಷಾ ದಿನಾಂಕಗಳನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ನೊಂದಾಯಿಸಿಕೊಂಡ ಅಭ್ಯರ್ಥಿಗಳು ಇದೀಗ ಪರೀಕ್ಷಾ ದಿನಾಂಕಗಳನ್ನು ವೀಕ್ಷಿಸಬಹುದು.

ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಪರೀಕ್ಷೆ 2021ರ ಗ್ರೂಪ್ ಬಿ ಮತ್ತು ಗ್ರೂಪ್ ಸಿ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಡಿಸೆಂಬರ್ 23,2021 ರಿಂದ ಜನವರಿ 23,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.
ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಜನವರಿ 1,2022ರ ಅನ್ವಯ ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಆಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 1,51,000/-ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.
ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿಯ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಟಯರ್ I , ಟಯರ್ II , ಟಯರ್ III ಮತ್ತು ಟಯರ್ IV ಪರೀಕ್ಷೆಗಳ ಮೂಲಕ ಮತ್ತು ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಟಯರ್ I ಪರೀಕ್ಷೆಯನ್ನು ಏಪ್ರಿಲ್ 11 ರಿಂದ ಏಪ್ರಿಲ್ 21,2022ರವರೆಗೆ ನಿಗದಿಪಡಿಸಲಾಗಿದೆ. ಪರೀಕ್ಷಾ ಪ್ರವೇಶ ಪತ್ರವನ್ನು ಶೀಘ್ರದಲ್ಲಿ ಪ್ರಕಟಿಸಲಿದ್ದು, ಪರೀಕ್ಷೆಗೆ ನೊಂದಾಯಿಸಿಕೊಂಡ ಅಭ್ಯರ್ಥಿಗಳು ಆಗಾಗ್ಗೆ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡುತ್ತಿರತಕ್ಕದ್ದು.


Click it and Unblock the Notifications











