SSC CHSL Recruitment 2019: ಸಿಹೆಚ್ಎಸ್‌ಎಲ್‌ ಹುದ್ದೆಗಳ ಟೈಯರ್ II ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಸಿಬ್ಬಂದಿ ನೇಮಕಾತಿ ಆಯೋಗ ಹೈಯರ್ ಸೆಕೆಂಡರಿ ಲೆವೆಲ್ (10+2) ಹುದ್ದೆಗಳ ನೇಮಕಾತಿಯ ಟೈಯರ್ II ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಎಸ್‌ಎಸ್‌ಸಿಯ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಡೆಸಲಾದ ಟೈಯರ್ I ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಪರೀಕ್ಷೆಗೆ ಅರ್ಹರಾಗಿರುತ್ತಾರೆ.

ಎಸ್‌ಎಸ್‌ಸಿ ಸಿಹೆಚ್ಎಸ್‌ಎಲ್‌ ಟೈಯರ್ II  ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಸೆಪ್ಟೆಂಬರ್ 29,2019ರಂದು ಟೈಯರ್ II ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳು ಎಸ್‌ಎಸ್‌ಸಿ ಸಿಹೆಚ್ಎಸ್‌ಎಲ್‌ 2019ರ ಟೈಯರ್ II ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1: ಎಸ್‌ಎಸ್‌ಸಿಯ ಅಧಿಕೃತ ವೆಬ್ ಸೈಟ್ https://ssc.nic.in/ ಗೆ ಭೇಟಿ ಕೊಡಿ
ಸ್ಟೆಪ್ 2: ಅಭ್ಯರ್ಥಿಗಳು "Download SSC CHSL 2019 Tier II Admit Card" ನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ನಂತರ ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

For Quick Alerts
ALLOW NOTIFICATIONS  
For Daily Alerts

English summary
SSC 2019 has released tier II admit cards for SSC CHSL Examination on official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X