ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (ಸಿಹೆಚ್ಎಸ್ಎಲ್) ಪರೀಕ್ಷೆ 2021ರ ವಿವಿಧ ಹುದ್ದೆಗಳ ಟಯರ್ I ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ವೀಕ್ಷಿಸಬಹುದು.
ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (ಸಿಹೆಚ್ಎಸ್ಎಲ್) 2021ರ ವಿವಿಧ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಫೆಬ್ರವರಿ 1,2022 ರಿಂದ ಮಾರ್ಚ್ 7,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ಸಿಬ್ಬಂದಿ ನೇಮಕಾತಿ ಆಯೋಗದ ವಿವಿಧ ಹುದ್ದೆಗಳಿಗೆ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿಯ ವಿವಿಧ ಹುದ್ದೆಗಳಿಗೆ ಜನವರಿ 1,2022ರ ಅನ್ವಯ ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ, ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷ, ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷಗಳ ವಯೊಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಳ ದರ್ಜೆಯ ಗುಮಾಸ್ತ/ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/- ರಿಂದ 63,200/-ರೂ, ಪೋಸ್ಟಲ್ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 81,100/-ರೂ ಮತ್ತು ಡಾಟಾ ಎಂಟ್ರಿ ಆಪರೇಟರ್ (ಡಿಇಓ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,200/- ರಿಂದ 92,300/-ರೂ ವೇತನವನ್ನು ನೀಡಲಾಗುವುದು.
ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಟಯರ್ I , ಟಯರ್ II , ಟಯರ್ III ಮತ್ತು ಟಯರ್ IV ಪರೀಕ್ಷೆಗಳ ಮೂಲಕ ಮತ್ತು ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಟಯರ್ I ಪರೀಕ್ಷೆಯನ್ನು ಮೇ 24 ರಿಂದ ಜೂನ್ 10,2022ರವರೆಗೆ ನಿಗದಿಪಡಿಸಲಾಗಿತ್ತು. ಇದೀಗ ಟಯರ್ I ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದ್ದು, ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಟಯರ್ II ಪರೀಕ್ಷೆಯು ಸೆಪ್ಟೆಂಬರ್ 18,2022ರಂದು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎಂದು ಇಲ್ಲಿ ತಿಳಿಯಿರಿ.

ಎಸ್‌ಎಸ್‌ಸಿ ಸಿಹೆಚ್ಎಸ್ಎಲ್ ಟಯರ್ I ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ ?:
ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://ssc.nic.in/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಎಸ್‌ಎಸ್‌ಸಿ ಸಿಹೆಚ್ಎಸ್ಎಲ್ ಟಯರ್ I ಫಲಿತಾಂಶದ ಲಿಂಕ್ ಅನ್ನು ಕ್ಲಿಕ್ ಮಾಡಿ.
ಸ್ಟೆಪ್ 3 : ಸ್ಕ್ರೀನ್ ಮೇಲೆ ಪಿಡಿಎಫ್ ಪುಟ ತೆರೆಯಲಿದೆ
ಸ್ಟೆಪ್ 4 : ಅಭ್ಯರ್ಥಿಗಳು ನಿಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಿ
ಸ್ಟೆಪ್ 5 : ಫಲಿತಾಂಶವನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟೌಟ್ ತೆಗೆದುಕೊಳ್ಳಿ
ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.