ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (ಸಿಹೆಚ್ಎಸ್ಎಲ್) ಪರೀಕ್ಷೆ 2021ರ ವಿವಿಧ ಹುದ್ದೆಗಳ ಟಯರ್ I ಪರೀಕ್ಷೆಯ ದಿನಾಂಕಗಳನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ನೊಂದಾಯಿಸಿಕೊಂಡ ಅಭ್ಯರ್ಥಿಗಳು ಇದೀಗ ಪರೀಕ್ಷಾ ದಿನಾಂಕಗಳನ್ನು ವೀಕ್ಷಿಸಬಹುದು.

ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (ಸಿಹೆಚ್ಎಸ್ಎಲ್) 2021ರ ವಿವಿಧ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಫೆಬ್ರವರಿ 1,2022 ರಿಂದ ಮಾರ್ಚ್ 7,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.
ಸಿಬ್ಬಂದಿ ನೇಮಕಾತಿ ಆಯೋಗದ ವಿವಿಧ ಹುದ್ದೆಗಳಿಗೆ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿಯ ವಿವಿಧ ಹುದ್ದೆಗಳಿಗೆ ಜನವರಿ 1,2022ರ ಅನ್ವಯ ಹುದ್ದೆಗಳಿಗನುಸಾರ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ, ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷ, ಅಂಗವಿಕಲ (ಪ.ಜಾ/ಪ.ಪಂ) ಅಭ್ಯರ್ಥಿಗಳಿಗೆ 15 ವರ್ಷಗಳ ವಯೊಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಳ ದರ್ಜೆಯ ಗುಮಾಸ್ತ/ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/- ರಿಂದ 63,200/-ರೂ, ಪೋಸ್ಟಲ್ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 81,100/-ರೂ ಮತ್ತು ಡಾಟಾ ಎಂಟ್ರಿ ಆಪರೇಟರ್ (ಡಿಇಓ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,200/- ರಿಂದ 92,300/-ರೂ ವೇತನವನ್ನು ನೀಡಲಾಗುವುದು.
ಸಿಬ್ಬಂದಿ ನೇಮಕಾತಿ ಆಯೋಗದ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಟಯರ್ I , ಟಯರ್ II , ಟಯರ್ III ಮತ್ತು ಟಯರ್ IV ಪರೀಕ್ಷೆಗಳ ಮೂಲಕ ಮತ್ತು ಕೌಶಲ್ಯ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಟಯರ್ I ಪರೀಕ್ಷೆಯನ್ನು ಮೇ 24 ರಿಂದ ಜೂನ್ 10,2022ರವರೆಗೆ ನಿಗದಿಪಡಿಸಲಾಗಿದೆ. ಪರೀಕ್ಷಾ ಪ್ರವೇಶ ಪತ್ರವನ್ನು ಶೀಘ್ರದಲ್ಲಿ ಪ್ರಕಟಿಸಲಿದ್ದು, ಪರೀಕ್ಷೆಗೆ ನೊಂದಾಯಿಸಿಕೊಂಡ ಅಭ್ಯರ್ಥಿಗಳು ಆಗಾಗ್ಗೆ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡುತ್ತಿರತಕ್ಕದ್ದು.


Click it and Unblock the Notifications











