SSC CHSL Tier II Admit Card 2021 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಸಿಬ್ಬಂದಿ ನೇಮಕಾತಿ ಆಯೋಗವು ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (ಸಿಹೆಚ್ಎಸ್ಎಲ್) 2020ರ ಟಯರ್ II ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಈ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಇದೀಗ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಎಸ್‌ಸಿ ಸಿಹೆಚ್‌ಎಸ್‌ಎಲ್ ಟಯರ್ II ಪರೀಕ್ಷೆಯ ಪ್ರವೇಶ ಪತ್ರ ಔಟ್

ಸಿಬ್ಬಂದಿ ನೇಮಕಾತಿ ಆಯೋಗವು ಕೆಳ ದರ್ಜೆಯ ಗುಮಾಸ್ತ/ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್, ಪೋಸ್ಟಲ್ ಅಸಿಸ್ಟೆಂಟ್ ಮತ್ತು ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (ಸಿಹೆಚ್ಎಸ್ಎಲ್) ಪರೀಕ್ಷೆಗೆ ಡಿಸೆಂಬರ್ 26,2020ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಟಯರ್-I, ಟಯರ್-II, ಟಯರ್-III (ಕೌಶಲ್ಯ ಪರೀಕ್ಷೆ/ಟೈಪಿಂಗ್ ಪರೀಕ್ಷೆ), ದಾಖಲೆ ಪರಿಶೀಲನೆ ಹಾಗೂ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು. ಈಗಾಗಲೇ ಟಯರ್ I ಪರೀಕ್ಷೆಯ ಫಲಿತಾಂಶ ಪ್ರಕಟ ಮಾಡಲಾಗಿದೆ. ಟಯರ್ II ಪರೀಕ್ಷೆಯನ್ನು ಜನವರಿ 9,2022ರಂದು ನಡೆಸಲು ನಿಗದಿಪಡಿಸಲಾಗಿದ್ದು, ಇದೀಗ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಸ್‌ಎಸ್‌ಸಿ ಸಿಹೆಚ್ಎಸ್ಎಲ್ ಟಯರ್ II ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಎಸ್‌ಎಸ್‌ಸಿ ಅಧಿಕೃತ ವೆಬ್‌ಸೈಟ್ https://ssc.nic.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಆಯ್ಕೆಯ ವೆಬ್‌ಸೈಟ್ ಗೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ಎಸ್‌ಎಸ್‌ಸಿ ಸಿಹೆಚ್ಎಸ್ಎಲ್ ಟಯರ್ IIಪರೀಕ್ಷೆಯ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಅಭ್ಯರ್ಥಿಗಳು ನಿಮ್ಮ ರೋಲ್ ನಂಬರ್/ರಿಜಿಸ್ಟ್ರೇಶನ್ ನಂಬರ್ ಅಥವಾ ಅಭ್ಯರ್ಥಿಗಳ ಹೆಸರು/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 6: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ.

ಎಸ್‌ಎಸ್‌ಸಿ ನೇಮಕಾತಿ :

ಸಿಬ್ಬಂದಿ ನೇಮಕಾತಿ ಆಯೋಗವು ವಿವಿಧ ಹುದ್ದೆಗಳ ನೇಮಕಾತಿಗಾಗಿ ಪಿಯುಸಿ ವಿದ್ಯಾರ್ಹತೆ ಮತ್ತು ಪಿಯುಸಿ ಯಲ್ಲಿ ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ಜನವರಿ 1,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಎಸ್‌ಎಸ್‌ಸಿ ನೇಮಕಾತಿಯ ಕೆಳ ದರ್ಜೆಯ ಗುಮಾಸ್ತ/ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 19,900/- ರಿಂದ 63,200/-ರೂ, ಪೋಸ್ಟಲ್ ಅಸಿಸ್ಟೆಂಟ್/ಸಾರ್ಟಿಂಗ್ ಅಸಿಸ್ಟೆಂಟ್ ಮತ್ತು ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 81,100/-ರೂ ಮತ್ತು ಡಾಟಾ ಎಂಟ್ರಿ ಆಪರೇಟರ್ (ಡಿಇಓ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 29,200/- ರಿಂದ 92,300/-ರೂ ವೇತನವನ್ನು ನೀಡಲಾಗುವುದು.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
SSC released CHSL tier II examination admit card. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+