SSC Constable (GD) Admit Card 2021 : ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ?

ಸಿಬ್ಬಂದಿ ನೇಮಕಾತಿ ಆಯೋಗವು (ಎಸ್‌ಎಸ್‌ಸಿ) ಕಾನ್‌ಸ್ಟೇಬಲ್ (ಜಿಡಿ) ಹುದ್ದೆಗಳ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಪ್ರವೇಶ ಪತ್ರವನ್ನು ರಿಲೀಸ್ ಮಾಡಲಾಗಿದೆ. ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಎಸ್‌ಸಿ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷಾ ಪ್ರವೇಶ ಪತ್ರ ಪ್ರಕಟ

ಸಿಬ್ಬಂದಿ ನೇಮಕಾತಿ ಆಯೋಗವು ಕಾನ್‌ಸ್ಟ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ನವೆಂಬರ್ 16,2021 ರಿಂದ ಡಿಸೆಂಬರ್ 15,2021ರ ವರೆಗೆ ನಡೆಸಲು ನಿಗದಿಪಡಿಸಲಾಗಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಸ್‌ಎಸ್‌ಸಿ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡುವುದು ಹೇಗೆ?:

ಸ್ಟೆಪ್ 1: ಸಿಬ್ಬಂದಿ ನೇಮಕಾತಿ ಆಯೋಗದ ಅಧಿಕೃತ ವೆಬ್ ಸೈಟ್ https://ssc.nic.in/ ಗೆ ಭೇಟಿ ಕೊಡಿ
ಸ್ಟೆಪ್ 2: ಅಭ್ಯರ್ಥಿಗಳು "Download SSC Constable (GD) 2021 CBT Admit Card" ನ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ಐಡಿ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ನಂತರ ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಎಸ್‌ಎಸ್‌ಸಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು 90 ನಿಮಿಷಗಳ ಕಾಲ ನಡೆಸಲಾಗುವುದು. ಪರೀಕ್ಷೆಯಲ್ಲಿ ಒಟ್ಟು 100 ಅಂಕಗಳಿಗೆ 100 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪರೀಕ್ಷೆಯಲ್ಲಿ ಋಣಾತ್ಮಕ ಅಂಕಗಳಿರುತ್ತವೆ ಎಂಬುದನ್ನು ಅಭ್ಯರ್ಥಿಗಳು ಗಮನಿಸಬೇಕು. ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಅಭ್ಯರ್ಥಿಗಳಿಗೆ ಸಾಮಾನ್ಯ ಜ್ಞಾನ, ರೀಸನಿಂಗ್, ಗಣಿತ, ಹಿಂದಿ/ಇಂಗ್ಲಿಷ್ ಮತ್ತು ಇತರ ವಿಷಯಗಳಿಂದ ಪ್ರಶ್ನೆಗಳನ್ನು ಕೇಳಲಾಗುತ್ತದೆ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Staff selection commission released computer based test 2021 admit card for constable (GD) posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+