ಸಿಬ್ಬಂದಿ ನೇಮಕಾತಿ ಆಯೋಗವು ಶೀಘ್ರಲಿಪಿಗಾರ ಗ್ರೇಡ್ 'ಸಿ' ಮತ್ತು ಗ್ರೇಡ್ 'ಡಿ' ಹುದ್ದೆಗಳ ಕೌಶಲ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಆಯೋಗವು ಒಟ್ಟು 1201 ಹುದ್ದೆಗಳನ್ನು ಭರ್ತಿ ಮಾಡಲು ನವೆಂಬರ್ 20,2018ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಶೀಘ್ರಲಿಪಿಗಾರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ,ಕೌಶಲ್ಯ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಿದ್ದು, ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆಯಾದ ಅಭ್ಯರ್ಥಿಗಳಿಗೆ ಇದೀಗ ಕೌಶಲ್ಯ ಪರೀಕ್ಷೆಯನ್ನು ನಡೆಸುತ್ತಿದ್ದು, ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿರುತ್ತದೆ.
ಶೀಘ್ರಲಿಪಿಗಾರ ಪರೀಕ್ಷೆ ಅಥವಾ ದಾಖಲೆಗಳ ಪರಿಶೀಲನೆಯು ನವೆಂಬರ್ 11,2019 ರಿಂದ ನವೆಂಬರ್ 22,2019ರ ವರೆಗೆ ನಡೆಯಲಿದ್ದು, ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://ssc-cr.org/index.php ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications