ಎಸ್ ಎಸ್ ಎಲ್ ಸಿ: ಉತ್ತರ ಪತ್ರಿಕೆಯ ಛಾಯಾ ಪ್ರತಿ ಮತ್ತು ಮರು ಎಣಿಕೆ ವಿವರ

ಈ ಬಾರಿಯ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅವಕಾಶ ಕಲ್ಪಿಸಿದ್ದು ಆಸಕ್ತ ವಿದ್ಯಾರ್ಥಿಗಳು ದಿನಾಂಕ 22-05-2017 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದ್ದು ರಾಜ್ಯದಲ್ಲಿ ಈ ಬಾರಿ ಶೇ.67.87 ರಷ್ಟು ಫಲಿತಾಂಶ ಕಂಡುಬಂದಿದೆ. ಕಳೆದ ಆರು ವರ್ಷಗಳಲ್ಲಿ ಈ ಬಾರಿಯೇ ಫಲಿತಾಂಶದಲ್ಲಿ ಇಳಿಕೆ ಕಂಡುಬಂದಿದ್ದು, ಕಟ್ಟುನಿಟ್ಟಿನ ಪರೀಕ್ಷಾ ಕ್ರಮವೇ ಕಡಿಮೆ ಫಲಿತಾಂಶಕ್ಕೆ ಕಾರಣ ಎಂದು ಹೇಳಲಾಗಿದೆ.

ಈ ಬಾರಿಯ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನ ಮತ್ತು ಮರುಎಣಿಕೆಗೆ ಅವಕಾಶ ಕಲ್ಪಿಸಿದ್ದು ಆಸಕ್ತ ವಿದ್ಯಾರ್ಥಿಗಳು ದಿನಾಂಕ 22-05-2017 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಎಸ್ ಎಸ್ ಎಲ್ ಸಿ ಛಾಯಾ ಪ್ರತಿ ಮತ್ತು ಮರು ಎಣಿಕೆ ವಿವರ

ಛಾಯಾಪ್ರತಿಗಾಗಿ/ ಮರುಎಣಿಕೆಗಾಗಿ

ಉತ್ತರ ಪತ್ರಿಕೆಯ ಛಾಯಾಪ್ರತಿಗಾಗಿ/ ಮರುಎಣಿಕೆಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-05-2017

ಶುಲ್ಕದ ವಿವರ

ಮರುಎಣಿಕೆ ಒಂದು ವಿಷಯಕ್ಕೆ: ರೂ.150/-
ಛಾಯಾಪ್ರತಿ ಒಂದು ವಿಷಯಕ್ಕೆ: ರೂ.300/-

ಉತ್ತರ ಪತ್ರಿಕೆಯ ಮರುಮೌಲ್ಯಮಾಪನ

ಉತ್ತರ ಪತ್ರಿಕೆಯ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಛಾಯಾಪ್ರತಿ ಸ್ವೀಕರಿಸಿದ 07ದಿನದೊಳಗಾಗಿ ಮಂಡಳಿಗೆ ಸಲ್ಲಿಸುವುದು.

ಶುಲ್ಕದ ವಿವರ

ಮರುಮೌಲ್ಯಮಾಪನ ಒಂದು ವಿಷಯಕ್ಕೆ ರೂ.700/-

ಇತರೆ ಸೂಚನೆ

  • 2017 ನೇ ಸಾಲಿನಲ್ಲಿ ವಿದ್ಯಾರ್ಥಿಗಳು ಮರು ಎಣಿಕೆ, ಛಾಯಾಪ್ರತಿ ಹಾಗೂ ಮರು ಮೌಲ್ಯಮಾಪನಕ್ಕೆ ಅರ್ಜಿಗಳನ್ನು ಬೆಂಗಳೂರು ಒನ್/ಕರ್ನಾಟಕ ಒನ್ ಮುಖಾಂತರ ಸಲ್ಲಿಸಬಹುದು.
  • ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ವ್ಯಾಸಂಗಕ್ಕೆ ಹಾಗೂ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮುಂದಿನ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮರುಮೌಲ್ಯಮಾಪನದ ಫಲಿತಾಂಶಕ್ಕಾಗಿ ಕಾಯಬಾರದು.
  • ಮರುಮೌಲ್ಯಮಾಪನದ ಬಗ್ಗೆ ಮರುಮೌಲ್ಯಮಾಪಕರು ತೆಗೆದುಕೊಂಡ ನಿರ್ಧಾರವೇ ಅಂತಿಮ ಇದರ ಬಗ್ಗೆ ಮರುಪರಿಶೀಲನೆ ಅಥವಾ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ.
  • ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳುವ ವಿದ್ಯಾರ್ಥಿಗಳು ಮೊದಲು ಉತ್ತೀರ್ಣರಾದ ಎರಡು ವರ್ಷದೊಳಗೆ ಅದೇ ವಿಷಯ/ವಿಷಯಗಳಿಗೆ ಪರೀಕ್ಷೆ ತೆಗೆದುಕೊಳ್ಳಬಹುದು.
  • ಯಾವುದೇ ವಿದ್ಯಾರ್ಥಿ ಶಾಲಾ ಅಭ್ಯರ್ಥಿಯಾಗಿ ಪುನಃ ಪರೀಕ್ಷೆಯನ್ನು ತೆಗೆದುಕೊಳ್ಳಲು ಇಚ್ಛಿಸಿದಲ್ಲಿ ಶಾಲೆಗೆ ಮರು ಪ್ರವೇಶ ಪಡೆಯಲು ಅವಕಾಶವಿದೆ.
  • ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳ ಉತ್ತೀರ್ಣ ಪ್ರಮಾಣ ಪತ್ರಗಳನ್ನು ಆಯಾ ಶಾಲೆಗಳಿಗೆ ಮರುಎಣಿಕೆ ಮತ್ತು ಮರು ಮೌಲ್ಯಮಾಪನ ಕಾರ್ಯ ಪೂರ್ಣಗೊಂಡ ನಂತರ ಕಳುಹಿಸಲಾಗುವುದು.
For Quick Alerts
ALLOW NOTIFICATIONS  
For Daily Alerts

English summary
Last date for applying revaluation is: seven days after the receipt of the xerox copy of the answer script
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X