Karnataka SSLC Exam 2020: ಪರೀಕ್ಷೆ ರದ್ದು ಇಲ್ಲ, ನಿಗಧಿತ ದಿನಾಂಕಕ್ಕೆ ಪರೀಕ್ಷೆ ನಡೆಯಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದೇ ನಡೆಯುತ್ತದೆ: ಸಚಿವ ಸುರೇಶ್ ಕುಮಾರ್

ತಮಿಳುನಾಡು ಮತ್ತು ತೆಲಂಗಾಣ ಸರ್ಕಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತದೆಯೇ ಎನ್ನುವ ಪ್ರಶ್ನೆ ಹೆಚ್ಚು ಕೇಳಿಬರುತ್ತಿದೆ. ಆದರೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಈ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆದೇ ನಡೆಯುತ್ತದೆ ಅದರ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಹೇಳಿದ್ದಾರೆ. ಹೈಕೋರ್ಟ್ ಕೂಡ ಪರೀಕ್ಷೆ ನಡೆಸಲು ಅನುಮತಿ ನೀಡಿದೆ ಜೊತೆಗೆ ಕೆಲವು ಸೂಚನೆಗಳನ್ನು ನೀಡಿದೆ. ಅವುಗಳನ್ನು ಅನುಸರಿಸಿಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

 

ಜೂನ್ 12 ರಿಂದ ಜೂನ್ 20ರ ವರೆಗೆ ವಿದ್ಯಾರ್ಥಿಗಳಿಗೆ ಪುನರ್ ಮನನ ಕಾರ್ಯಕ್ರಮಗಳನ್ನು ಮಾಡಲಾಗುವುದು. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಸಾರಿಗೆ ವ್ಯವಸ್ಥೆ ಕಲ್ಪಿಸುವ ಬಗ್ಗೆ ಸಾರಿಗೆ ಸಚಿವರ ಬಳಿ ಚರ್ಚಿಸುವುದಾಗಿ ಹೇಳಿದ್ದಾರೆ.

ಇತ್ತೀಚೆಗೆ ಪ್ರಕಟವಾದ ಪರಿಷ್ಕೃ ವೇಳಾಪಟ್ಟಿಯಂತೆ ಜೂನ್ 25 ರಿಂದ ಜುಲೈ 4ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡು ಪರೀಕ್ಷೆಯನ್ನು ನಡೆಸಲು ಸಿದ್ಧರಿದ್ದೇವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಕೊರೋನಾದಿಂದಾಗಿ ಇತರೆ ಸರ್ಕಾರಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದು ಗೊಳಿಸಿರುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಉತ್ತರಿಸಿದ ಸಚಿವ ಸುರೇಶ್ ಕುಮಾರ್ ಅವರು ತಮಿಳುನಾಡು ನಮ್ಮನ್ನು ಫಾಲೋ ಮಾಡಬೇಕಿತ್ತು , ನಾವು ಮಕ್ಕಳ ಹಿತ, ಭವಿಷ್ಯಕ್ಕಾಗಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪರೀಕ್ಷೆಯನ್ನು ನಡೆಸಲು ಮುಂದಾಗುತ್ತಿದ್ದೇವೆ. ಕೇಂದ್ರದ ಮಾನವ ಸಂಪನ್ಮೂಲ ಸಚಿವಾಲಯ ಮತ್ತು ಗೃಹ ಸಚಿವಾಲಯ ಕೂಡಾ ಪರೀಕ್ಷೆ ನಡೆಸಲು ಹಸಿರು ನಿಶಾನೆ ತೋರಿದೆ ಎಂದು ಅವರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡರು.

For Quick Alerts
ALLOW NOTIFICATIONS  
For Daily Alerts

English summary
SSLC exam 2020 will conduct in karnataka and there is no chances of cancellation said by minister s suresh kumar.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X