
ರಾಜ್ಯದಲ್ಲಿ ಸಿಬಿಎಸ್ಇ ರೀತಿಯಲ್ಲಿ ಪರೀಕ್ಷೆ ರದ್ದು ಕುರಿತು ಊಹಾಪೋಹ ಎದ್ದಿದೆ ಅದಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಟ್ವೀಟ್ ಮಾಡಿರುವ ಅವರು ರಾಜ್ಯದಲ್ಲಿ ಸಿಬಿಎಸ್ಇ ರೀತಿ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತು " ಸಿಬಿಎಸ್ಇ ಹತ್ತನೇ ತರಗತಿಗಳ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ.
ನಮ್ಮ ರಾಜ್ಯದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಬೇಕಿರುವುದು ಜೂನ್ 21.2021ರಿಂದ ಅಂದರೆ ಜೂನ್ 21 ರಿಂದ. ಆದ್ದರಿಂದ ಈಗ ನಮ್ಮ ರಾಜ್ಯದಲ್ಲಿ ಸಿಬಿಎಸ್ಇ ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಮುಂದಿನ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು" ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.
For Quick Alerts
For Daily Alerts
English summary
Karnataka primary and secondary education minister s suresh kumar clarified there is no changes in current schedule of SSLC exams.


Click it and Unblock the Notifications