ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜೂನ್ ತಿಂಗಳ ಮೂರನೇ ಅಥವಾ ನಾಲ್ಕನೇ ವಾರದಲ್ಲಿ ನಡೆಸಲು ಇಲಾಖೆ ಚಿಂತನೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಮಂಗಳವಾರ ಬೆಳಿಗ್ಗೆ ಫೇಸ್‌ಬುಕ್ ಲೈವ್ ನಲ್ಲಿ ಮಾತನಾಡಿದ ಅವರು ಪರೀಕ್ಷಾ ಕೇಂದ್ರಗಳಲ್ಲಿ ಸುರಕ್ಷಿತ ವಾತಾವರಣವನ್ನು ಕಾಪಾಡಿಕೊಳ್ಳಬೇಕಿದ್ದು ಈ ನಿಟ್ಟಿನಲ್ಲಿ ಕೇಂದ್ರಗಳಲ್ಲಿ ಸ್ಯಾನಿಟೈಸರ್ ಬಳಕೆ ಹಾಗೂ ಸಾಮಾಜಿಕ ಅಂತರ ನೋಡಿಕೊಳ್ಳುವಂತೆ ಹಾಗೂ ಪರೀಕ್ಷಕರು ಕಡ್ಡಾಯ ಮಾಸ್ಕ್ ಧರಿಸಬೇಕು ಎಂದು ತಿಳಿಸಿದ್ದಾರೆ.
ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳು ಎಲ್ಲಿ ಪರೀಕ್ಷೆ ಬರೆಯಲು ಬಯಸುತ್ತಾರೋ ಅದೇ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಶಿಕ್ಷಣ ಇಲಾಖೆ ಅವಕಾಶ ನೀಡಲಿದೆ. ಅಲ್ಲದೇ ವಿದ್ಯಾರ್ಥಿಗಳು ಪರೀಕ್ಷೆ ಬಗ್ಗೆ ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ ಪರೀಕ್ಷೆಯ ವೇಳಾಪಟ್ಟಿಯನ್ನು 20 ರಿಂದ 30 ದಿನಗಳ ಒಳಗಾಗಿಯೇ ಪ್ರಕಟಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.


Click it and Unblock the Notifications











