ಸ್ಟಾಫ್ ಸೆಲೆಕ್ಷನ್ ಕಮಿಷನ್ ಸಿಹೆಚ್‌ಎಸ್‌ಎಲ್‌ ಪರೀಕ್ಷೆ 2019 : ಏಪ್ರಿಲ್ 5 ರೊಳಗೆ ಅರ್ಜಿ ಹಾಕಿ

ಎಸ್‌ಎಸ್‌ಸಿ ನೇಮಕಾತಿಗೆ ಇಂದೇ ಅರ್ಜಿ ಹಾಕಿ

ಸಿಬ್ಬಂದಿ ಆಯ್ಕೆ ಆಯೋಗ ಭಾರತದೆಲ್ಲೆಡೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಲೋಯರ್ ಡಿವಿಷನ್ ಕ್ಲರ್ಕ್ (LDC) /ಜ್ಯೂನಿಯರ್ ಸೆಕ್ರೇಟರಿಯೆಟ್ ಅಸಿಸ್ಟೆಂಟ್ (JSA), ಪೋಸ್ಟಲ್ ಅಸಿಸ್ಟೆಂಟ್ (PA) / ಸಾರ್ಟಿಂಗ್ ಅಸಿಸ್ಟೆಂಟ್ (SA),ಡಾಟಾ ಎಂಟ್ರಿ ಆಪರೇಟರ್ (DEO) ಮತ್ತು ಡಾಟಾ ಎಂಟ್ರಿ ಆಪರೇಟರ್ ಗ್ರೇಡ್ ಎ ಹುದ್ದೆಗಳಿಗೆ ಸೇರಲು ಸಿಹೆಚ್‌ಎಸ್‌ಎಲ್‌ ಪರೀಕ್ಷೆಯನ್ನು ಬರೆಯಬೇಕಿದ್ದು ಏಪ್ರಿಲ್ 5,2019ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಈ ಹುದ್ದೆಗಳಿಗೆ 10+2 ಅಂದರೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಪರೀಕ್ಷೆಯನ್ನು ತೆಗೆದುಕೊಳ್ಳಬಹುದಾಗಿದ್ದು, ಗರಿಷ್ಟ 27 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ೫ ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ, ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 5,200/- ರಿಂದ 20,200/-ರೂ ವೇತನವನ್ನು ನೀಡಲಾಗುವುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಸುವುದರ ಜೊತೆಗೆ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿದ್ದು ಸಾಮಾನ್ಯ ಅಭ್ಯರ್ಥಿಗಳು 100/-ರೂ ಶುಲ್ಕ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ /ಅಂಗವಿಕಲ /ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ. ಪರೀಕ್ಷಾ ವಿವರಗಳನ್ನು ಅಧಿಕೃತ ವೆಬ್‌ಸೈಟ್ ನಲ್ಲಿ ಅತೀ ಶೀಘ್ರದಲ್ಲಿ ತಿಳಿಸಲಾಗುವುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://ssc.nic.in/ ಗೆ ಹೋಗಿ ಅರ್ಜಿ ಯನ್ನು ಸಲ್ಲಿಸಬಹುದು ಮತ್ತು ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Staff Selection Commission (SSC) is going to recruit candidates to fill their SSC CHSL (10+2) Exam 2019 in All India. Job Aspirants are requested to go through official website of SSC job notification 2019 before apply. Eligible candidates can apply online through the official website, ssc.nic.in. Last Date to submit the online application form is 05th April 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+