ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2019ರ ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಆನ್‌ಲೈನ್ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಫಲಿತಾಂಶವನ್ನು ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿಕೊಳ್ಳಬಹುದು.
ಎಸ್‌ಬಿಐ ಒಟ್ಟು 477 ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ 20,2019ರಂದು ಆನ್‌ಲೈನ್ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ಹೆಸರನ್ನು ಈಗ ಬಿಡುಗಡೆ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಹಾಜರಾಗಲು ಅರ್ಹರಾಗಿರುತ್ತಾರೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2019ರ ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳ ನೇರ ಸಂದರ್ಶನವು ಡಿಸೆಂಬರ್ 9,2019ರಂದು ನಡೆಯಲಿದ್ದು, ಅಭ್ಯರ್ಥಿಗಳು ಈಗಲೇ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು. ಫಲಿತಾಂಶವನ್ನು ಹೇಗೆ ಚೆಕ್ ಮಾಡಿಕೊಳ್ಳಬೇಕು ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಲು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ https://www.sbi.co.in/careers/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನ ಕೆಳಭಾಗದಲ್ಲಿ ಲಭ್ಯವಿರುವ current openings ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ "Recruitment of specialist cadre officer on regular/contract basis" ಮುಂದಿರುವ interview schedule announced for post: manager anayst ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 4: ಅಲ್ಲಿ ಲಭ್ಯವಾಗುವ interview schedule ಕೆಳಗಿರುವ ಆಯ್ಕೆಯನ್ನು ಸೆಲೆಕ್ಟ್ ಮಾಡಿ ಕ್ಲಿಕ್ ಮಾಡಿ
ಸ್ಟೆಪ್ 5: ನಿಮ್ಮ ಫಲಿತಾಂಶ ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 6: ನಂತರ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ
ಸ್ಟೆಪ್ 7: ಅಭ್ಯರ್ಥಿಗಳು ಫಲಿತಾಂಶದ ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ