ಎಸ್‌ಬಿಐ ನೇಮಕಾತಿ 2019: ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶ ಪ್ರಕಟ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 2019 ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ನಡೆಸಿದ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಫಲಿತಾಂಶವನ್ನು ಅಭ್ಯರ್ಥಿಗಳು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿಕೊಳ್ಳಬಹುದು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶ ಬಿಡುಗಡೆ

 

ಎಸ್‌ಬಿಐ ಒಟ್ಟು 8,904 ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಮೇ 3,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು ಇದೀಗ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ.

ಎಸ್‌ಬಿಐ ಕ್ಲರ್ಕ್‌ ಹುದ್ದೆಗಳ ಪ್ರಮುಖ ಪರೀಕ್ಷೆ 2019:

ಪ್ರಿಲಿಮಿನರಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಪ್ರಮುಖ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿರುತ್ತಾರೆ. ಎಸ್‌ಬಿಐ ಪ್ರಮುಖ ಪರೀಕ್ಷೆಯು ಕಂಪ್ಯೂಟರ್‌ ಆಧಾರಿತವಾಗಿದ್ದು, ಆಗಸ್ಟ್ 10,2019ರಂದು ಪ್ರಮುಖ ಪರೀಕ್ಷೆಗಳು ನಡೆಯಲಿವೆ.

ಪ್ರಮುಖ ಪರೀಕ್ಷೆ ಪ್ರವೇಶ ಪತ್ರವು ಇನ್ನು ಒಂದು ವಾರದೊಳಗೆ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಅನ್ನು ಪರಿಶೀಲಿಸುತ್ತಿರತಕ್ಕದ್ದು.

ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಲು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ https://sbi.co.in/ ಗೆ ಹೋಗಿ

ಸ್ಟೆಪ್ 2: ನಂತರ "SBI Clerk Prelims 2019 Results"ನ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಇಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂ / ರೋಲ್ ನಂ ಮತ್ತು ಜನ್ಮ ದಿನಾಂಕ / ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ

ಸ್ಟೆಪ್ 4: ನಿಮ್ಮ ಫಲಿತಾಂಶ ಸ್ಕ್ರೀನ್ ಮೇಲೆ ಲಭ್ಯವಾಗುವುದು

ಸ್ಟೆಪ್ 5: ನಂತರ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ

ಸ್ಟೆಪ್ 6: ಅಭ್ಯರ್ಥಿಗಳು ಫಲಿತಾಂಶದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ

For Quick Alerts
ALLOW NOTIFICATIONS  
For Daily Alerts

English summary
SBI clerk preliminary examination 2019 has released the results in official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X