ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ರಾಜ್ಯ ಸರ್ಕಾರ ನೂತನ ಕ್ರಮ

Posted By:

ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ರಾಜ್ಯ ಸರಕಾರ ನೂತನ ಕ್ರಮ ಕೈಗೊಂಡಿದೆ. ವಿದ್ಯಾರ್ಥಿಗಳ ಸುರಕ್ಷೆ, ಲೈಂಗಿಕ ದೌರ್ಜನ್ಯ ತಡೆ ಸೇರಿದಂತೆ ಭದ್ರತೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತ ಆದೇಶ ಹೊರಡಿಸಿದೆ. 

ರಾಷ್ಟ್ರೀಯ ವಿಪತ್ತು ನಿರ್ವಹಣೆ ಪ್ರಾಕಾರ ಮತ್ತು ಮಾನವ ಸಂಪನ್ಮೂಲ ಅಭಿವೃದ್ ಸಚಿವಾಲಯಗಳು ರಾಷ್ಟ್ರೀಯ ವಿಪತ್ತು ನಿರ್ವಹಣೆ ಮಾರ್ಗಸೂಚಿಗಳು (ಶಾಲಾ ಸುರಕ್ಷತಾ ನೀತಿ) 2016 ಅನ್ನು ಶೀಘ್ರ ಅನುಷ್ಠಾನಗೊಳಿಸಲು ಅಗತ್ಯ ಜವಾಬ್ದಾರಿ, ಬದ್ಧತೆ, ಹೊಣೆಗಾರಿಕೆ ಮತ್ತು ಅಕಾರ ಹೊಂದಿರುವ ಡಿಡಿಪಿಐಗಳನ್ನು ಆಯಾ ಜಿಲ್ಲಾ ಮಟ್ಟದಲ್ಲಿ ನೋಡಲ್‌ ಅಕಾರಿಗಳೆಂದು ಘೋಷಿಸುವಂತೆ ಸಲಹೆ ನೀಡಿದೆ.

ವಿದ್ಯಾರ್ಥಿಗಳ ಸುರಕ್ಷತೆಗೆ ನೂತನ ಕ್ರಮ

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಕಾರ ಶಾಲಾ ಮಕ್ಕಳ ಸುರಕ್ಷತೆಗಾಗಿ ಹೊರಡಿಸಿರುವ ಶಾಸನಾತ್ಮಕ ಮಾರ್ಗಸೂಚಿ ರೂಪಿಸಿ ರಾಜ್ಯ ಸರಕಾರ ಆಯಾ ಜಿಲ್ಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ವಹಿಸಿ ಆದೇಶ ಹೊರಡಿಸಿದೆ.

ಸುಪ್ರೀಂಕೋರ್ಟ್‌ 2017ರ ಆ.14ರಂದು ಹೊರಡಿಸಿರುವ ಆದೇಶದಲ್ಲಿ ನಿಗದಿತ ಕಾಲಮಿತಿಯೊಳಗೆ ಮಾರ್ಗಸೂಚಿ ಅನುಷ್ಠಾನಗೊಳಿಸುವಂತೆ ಸರಕಾರಗಳಿಗೆ ನಿರ್ದೇಶನ ನೀಡಿದೆ. ಕರ್ನಾಟಕ ಶಿಕ್ಷಣ ಅನಿಯಮ 1983ರ ಸೆಕ್ಷನ್‌ 5-ಎ 2017ರ ಕರ್ನಾಟಕ ಅನಿಯಮ-25ರಲ್ಲಿ ತಿದ್ದುಪಡಿ ಮಾಡಿದಂತೆ ಯಾವುದೇ ಶಿಕ್ಷಣ ಸಂಸ್ಥೆ ಮತ್ತು ಅಂತಹ ಸಂಸ್ಥೆಗಳ ನೌಕರರು ವಿದ್ಯಾರ್ಥಿಗಳ ಸುರಕ್ಷೆ ಹಾಗೂ ಲೈಂಗಿಕ ದೌರ್ಜನ್ಯ ತಡೆ ಸೇರಿದಂತೆ ಭದ್ರತೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ವಿಫಲರಾದರೆ ದಂಡ

ಒಂದು ವೇಳೆ ಮಕ್ಕಳ ಮೇಲಿನ ದೌರ್ಜನ್ಯ ತಡೆಯುವಲ್ಲಿ ವಿಫಲವಾಗುವ ಯಾವುದೇ ನೌಕರ, ಶಾಲಾ ಆಡಳಿತ ಮಂಡಳಿ ಸದಸ್ಯರಿಗೆ ಕನಿಷ್ಠ ಆರು ತಿಂಗಳು ಶಿಕ್ಷೆ ಹಾಗೂ ಒಂದು ಲಕ್ಷ ರೂ.ವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

ಆಯಾ ಜಿಲ್ಲಾಕಾರಿಗಳ ನೇತೃತ್ವದ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಕಾರ ನಡೆಸುವ ತನಿಖೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದು ಸಾಬೀತಾದಲ್ಲಿ ಶಿಕ್ಷಣ ಸಂಸ್ಥೆಗಳಿಗೆ 10 ಲಕ್ಷ ರೂ.ವರೆಗೆ ದಂಡ ವಿಸಬಹುದಾಗಿದೆ. ಅಲ್ಲದೆ, ಅಂತಹ ಶಿಕ್ಷಣ ಸಂಸ್ಥೆಗಳ ಮಾನ್ಯತೆಯನ್ನು ರದ್ದುಪಡಿಸುವ ಅಕಾರ ನೀಡಲಾಗಿದೆ.

ಶಿಕ್ಷಣ ಸಂಸ್ಥೆಗಳು ಸೆಕ್ಷನ್‌ 48ರ ಅನ್ವಯ ವಿದ್ಯಾರ್ಥಿಗಳಿಂದ ಹೆಚ್ಚುವರಿ ಶುಲ್ಕ ಸಂಗ್ರಹಿಸಿದ್ದಲ್ಲಿ ಅದನ್ನು ವಾಪಸ್‌ ನೀಡುವಂತೆಯೂ ಆದೇಶಿಸಲು ಅವಕಾಶ ನೀಡಲಾಗಿದೆ.

ಕಲಂ 125 ಎ ಸೆಕ್ಷನ್‌ 88, 89 ಹಾಗೂ 90 ಅನ್ವಯ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಕಾರ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಿಗೆ 5 ಲಕ್ಷ ರೂ.ವರೆಗೆ ದಂಡ ವಿಧಿಸಲು ಕೂಡ ಅವಕಾಶ ಕಲ್ಪಿಸಲಾಗಿದೆ.

ಐಸಿಎಸ್‌ಸಿ, ಸಿಬಿಎಸ್‌ಸಿ ಶಾಲೆಗಳಿಗೂ ಅನ್ವಯ

ಸಿಬಿಎಸ್‌ಇ, ಐಸಿಎಸ್‌ಸಿ ಸೇರಿದಂತೆ ಕೇಂದ್ರ ಪಠ್ಯಕ್ರಮ ಅನುಸರಿಸುವ ಶಾಲೆಗಳಿಗೂ ಈ ಆದೇಶ ಅನ್ವಯವಾಗುವಂತೆ ಷರತ್ತು ವಿಸಲಾಗಿದೆ. ಪ್ರತಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ನೌಕರರು ಶಾಲೆಗಳಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ.

English summary
The state government has taken steps to ensure the safety of the students and the prevention of sexual assault.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia