ಕನ್ನಡ ಮಾಧ್ಯಮದಲ್ಲಿ ಕಲಿತವರಿಗೆ ನೀಡುವ ಮೀಸಲಾತಿಯಲ್ಲಿ ಬದಲಾವಣೆ

ಸರ್ಕಾರಿ ಹುದ್ದೆಗಳಿಗೆ ನಡೆಯುವ ನೇರ ನೇಮಕಾತಿಯಲ್ಲಿ ಶೇ 5ರಷ್ಟು ಹುದ್ದೆಗಳನ್ನು ಮೀಸಲಿಡುವ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಕನ್ನಡ ಮಾಧ್ಯಮದಲ್ಲಿ ಕಲಿತ ಹೊರ ರಾಜ್ಯದವರು ಕೂಡ ಮೀಸಲಾತಿಗೆ ಒಳಪಡಲಿದ್ದಾರೆ.

ಒಂದರಿಂದ ಹತ್ತನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಮೀಸಲಾತಿ ನೀಡುವ ವಿಚಾರವಾಗಿ ರಾಜ್ಯ ಸರ್ಕಾರ ನೂತನ ಸುತ್ತೋಲೆ ಹೊರಡಿಸಿದೆ.

ಸರ್ಕಾರಿ ಹುದ್ದೆಗಳಿಗೆ ನಡೆಯುವ ನೇರ ನೇಮಕಾತಿಯಲ್ಲಿ ಶೇ 5ರಷ್ಟು ಹುದ್ದೆಗಳನ್ನು ಮೀಸಲಿಡುವ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದ್ದು, ಕನ್ನಡ ಮಾಧ್ಯಮದಲ್ಲಿ ಕಲಿತ ಹೊರ ರಾಜ್ಯದವರು ಕೂಡ ಮೀಸಲಾತಿಗೆ ಒಳಪಡಲಿದ್ದಾರೆ.

ಕನ್ನಡಿಗರಿಗೆ ನೀಡುವ ಮೀಸಲಾತಿಯಲ್ಲಿ ಬದಲಾವಣೆ

ಯಾವುದಾದರೂ ಹುದ್ದೆಗೆ ಏಳನೇ ತರಗತಿ ವಿದ್ಯಾರ್ಹತೆಯಾಗಿದ್ದು, ಅರ್ಜಿ ಹಾಕುವ ಅಭ್ಯರ್ಥಿ ಅಲ್ಲಿಯವರೆಗೂ ಕನ್ನಡ ಮಾಧ್ಯಮದಲ್ಲಿ ಓದಿದ್ದರೆ ಅಂತಹವರಿಗೂ ಮೀಸಲು ಸೌಲಭ್ಯ ದೊರೆಯಲಿದೆ.

ನೂತನ ಸುತ್ತೋಲೆ ಹೊರಡಿಸಲು ಕಾರಣ

ಕನ್ನಡ ಮಾಧ್ಯಮ ಮೀಸಲಾತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗಿದ್ದರೆ 10ನೇ ತರಗತಿಯವರೆಗೂ ಕನ್ನಡ ಮಾಧ್ಯಮದಲ್ಲಿ ಓದಿರಬೇಕಿತ್ತು. ಕನಿಷ್ಠ ವಿದ್ಯಾರ್ಹತೆ ಏಳನೇ ತರಗತಿ ಎಂದು ನಿಗದಿಪಡಿಸಿದ್ದ ಹುದ್ದೆಗಳಿಗೆ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿಲ್ಲ ಎಂಬ ಕಾರಣಕ್ಕೆ ಅವಕಾಶ ನಿರಾಕರಿಸಲಾಗುತ್ತಿತ್ತು. ಅದನ್ನು ತಪ್ಪಿಸಲು ಸರ್ಕಾರ ಈ ಪರಿಷ್ಕೃತ ಸುತ್ತೋಲೆ ಹೊರಡಿಸಿದೆ.

ಕರ್ನಾಟಕದ ಶಾಲೆಗಳಲ್ಲಿ ಓದಿದವರಿಗೆ ಮಾತ್ರ ಅರ್ಜಿ ಸಲ್ಲಿಸಲು ಈ ಹಿಂದೆ ಅವಕಾಶ ಇತ್ತು. ಆದರೆ, ಹೊಸ ಸುತ್ತೋಲೆ ಅನ್ವಯ, ದೇಶದ ಯಾವುದೇ ಭಾಗದಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದವರು ಇನ್ನು ಮುಂದೆ ಅರ್ಜಿ ಸಲ್ಲಿಸಬಹುದು. ಇದರಿಂದಾಗಿ ಕರ್ನಾಟಕದ ಗಡಿಯಲ್ಲಿರುವ ಕನ್ನಡ ಶಾಲೆಗಳಲ್ಲಿ ಓದಿದ ಹೊರರಾಜ್ಯಗಳ ಕನ್ನಡಿಗರಿಗೂ ಉದ್ಯೋಗಾವಕಾಶ ಸಿಗಲಿದೆ.

For Quick Alerts
ALLOW NOTIFICATIONS  
For Daily Alerts

English summary
The state government has passed an order reserving 5 per cent of posts under direct recruitment for those candidates who have studied in Kannada medium from Class 1 to 10.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X