ಪ್ರತಿ ಹೋಬಳಿಯಲ್ಲೂ ಕನ್ನಡ ಪಬ್ಲಿಕ್ ಶಾಲೆ ತೆರೆಯಲು ರಾಜ್ಯ ಸರ್ಕಾರ ನಿರ್ಧಾರ

Posted By:

ಖಾಸಗಿ ಶಾಲೆಗಳು ಮತ್ತು ಇಂಗ್ಲಿಷ್ ಹೊಡೆತಕ್ಕೆ ಸಿಕ್ಕಿ ನಲುಗುತ್ತಿರುವ ಕನ್ನಡ ಸರ್ಕಾರಿ ಶಾಲೆಗಳಿಗೆ ಜೀವ ತುಂಬಲು ರಾಜ್ಯ ಸರ್ಕಾರ ಮುಂದಾಗಿದೆ.

ದೇಶದಾದ್ಯಂತ 25000 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಇಸ್ಕಾನ್ ಯೋಜನೆ

ರಾಜ್ಯದ ಪ್ರತಿ ಹೋಬಳಿಯಲ್ಲೂ ಕನ್ನಡ ಪಬ್ಲಿಕ್ ಶಾಲೆಗಳನ್ನು ತೆರೆಯುವ ನಿರ್ಧಾರದ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿ ಕಡೆಗೆ ಗಮನ ಹರಿಸಿದೆ.

'ಗೀತಾಸೂಪರ್‌ಸೈಟ್‌' ಮೂಲಕ ಭಾರತೀಯ ಗ್ರಂಥಗಳ ಡಿಜಿಟಲೀಕರಣ

ಪ್ರತಿ ಹೋಬಳಿಯಲ್ಲೂ ಕನ್ನಡ ಪಬ್ಲಿಕ್ ಶಾಲೆ

ಖಾಸಗಿ ಶಾಲೆಗಳಿಗೆ ಸಮನಾದ ಗುಣಮಟ್ಟದ ಶಿಕ್ಷಣ ಮತ್ತು ಮೂಲಭೂತ ಸೌಕರ್ಯಗಳಿರುವಂತಹ ಕನ್ನಡ ಪಬ್ಲಿಕ್ ಶಾಲೆಗಳನ್ನು ಪ್ರತಿ ಹೋಬಳಿಯಲ್ಲಿ ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈಗಾಗಲೇ ಅದಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳುತ್ತಿದೆ.

ರಾಜ್ಯದ 760 ಹೋಬಳಿಗಳಲ್ಲೂ ಕನ್ನಡ ಪಬ್ಲಿಕ್ ಶಾಲೆಗಳನ್ನು ತೆರೆಯಲು ರೂಪುರೇಷೆ ಸಿದ್ಧಪಡಿಸುವಂತೆ ಈಗಾಗಲೇ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಗ್ರಾ.ಪಂ ಮಟ್ಟದಲ್ಲಿ 1 ರಿಂದ 10 ನೇ ತರಗತಿ ಹಾಗು ಹೋಬಳಿ ಮಟ್ಟದಲ್ಲಿ ಸ್ಥಾಪಿಸುವ ಪಬ್ಲಿಕ್ ಶಾಲೆಗಳಲ್ಲಿ 1 ರಿಂದ 12 ನೇ ತರಗತಿವರೆಗು ಮಕ್ಕಳಿಗೆ ಕನ್ನಡ ಮಾಧ್ಯಮದಲ್ಲಿಯೇ ಬೋಧನೆ ಮಾಡಲು ಸರಕಾರ ತೀರ್ಮಾನಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.

ಸರಕಾರಿ ಶಾಲೆಗಳಲ್ಲೂ ಖಾಸಗಿ ಶಾಲೆಗಳಿಗೆ ಸಮನಾದಂತಹ ಎಲ್ಲ ರೀತಿಯ ವ್ಯವಸ್ಥಿತವಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ಕಲ್ಪಿಸಬೇಕೆಂಬುದು ಸರಕಾರದ ಗುರಿ. ಈ ನಿಟ್ಟಿನಲ್ಲಿ ಕರ್ನಾಟಕ/ ಕನ್ನಡ ಪಬ್ಲಿಕ್ ಶಾಲೆಗಳನ್ನು ತೆರೆಯಲು ಸರಕಾರ ಮುಂದಾಗಿದೆ. ಎಂದು ಅವರು ತಿಳಿಸಿದರು.

ಮುಂದಿನ ಎರಡು ಮೂರು ವರ್ಷಗಳಲ್ಲಿ ಎಲ್ಲ ಹೋಬಳಿಗಳಲ್ಲೂ ಈ ಶಾಲೆಗಳನ್ನು ತೆರೆಯಬೇಕೆಂಬುದು ಸರಕಾರದ ಉದ್ದೇಶವಾಗಿದೆ. ರಾಜ್ಯದ 72 ಹೋಬಳಿಗಳಲ್ಲಿ ಪದವಿ ಪೂರ್ವ ಕಾಲೇಜುಗಳೇ ಇಲ್ಲ. ಇಂತಹ ಕಡೆಗಳಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದರ ಜೊತೆಗೆ ಪ್ರತಿ ಗ್ರಾ.ಪಂ ಮಟ್ಟದಲ್ಲಿ ನಮ್ಮೂರ ಶಾಲೆಗಳನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲಾಗುವುದು ಎಂದು ಅವರು ಹೇಳಿದ್ದಾರೆ.

English summary
The state government has decided to open Kannada Public Schools, which have quality education and infrastructure similar to private schools.

ವೃತ್ತಿ ಬದುಕಿನ ಉತ್ತಮ ಅವಕಾಶಕ್ಕಾಗಿ, ಶಿಕ್ಷಣ, ವೃತ್ತಿ ಮತ್ತು ಉದ್ಯೋಗಕ್ಕೆ ಸಂಬಂಧಿಸಿದ ಇತ್ತೀಚಿನ ಮಾಹಿತಿಗಳನ್ನು ಪಡೆಯಿರಿ
Kannada Careerindia