ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಏಕರೂಪತೆ ಏಕಿಲ್ಲ ಎಂದು ಸುಪ್ರೀಂ ಕೋರ್ಟ್ ಪ್ರಶ್ನೆ

ನೀಟ್‌ ಪರೀಕ್ಷೆಯಲ್ಲಿ ಇಂಗ್ಲಿಷ್‌, ಹಿಂದಿ ಮತ್ತು ಇತರ ಪ್ರಾದೇಶಿಕ ಭಾಷೆಗಳಲ್ಲಿ ಏಕರೂಪದ ಪ್ರಶ್ನೆಪತ್ರಿಕೆಗಳನ್ನು ಯಾಕೆ ಬಳಸುತ್ತಿಲ್ಲ ಎಂದು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯನ್ನು (ಸಿಬಿಎಸ್‌ಇ) ಸುಪ್ರೀಂ ಕೋರ್ಟ್‌ ಗುರುವಾರ ಪ್ರಶ್ನಿಸಿದೆ.

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ನಡೆಸುವ ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ಏಕರೂಪದ ಪ್ರಶ್ನೆಪತ್ರಿಕೆಗಳನ್ನು ಬಳಸದಿರುವುದರ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ ಮಾಡಿದೆ.

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್‌) ಇಂಗ್ಲಿಷ್‌, ಹಿಂದಿ ಮತ್ತು ಇತರ ಪ್ರಾದೇಶಿಕ ಭಾಷೆಗಳಲ್ಲಿ ಏಕರೂಪದ ಪ್ರಶ್ನೆಪತ್ರಿಕೆಗಳನ್ನು ಯಾಕೆ ಬಳಸುತ್ತಿಲ್ಲ ಎಂದು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯನ್ನು (ಸಿಬಿಎಸ್‌ಇ) ಸುಪ್ರೀಂ ಕೋರ್ಟ್‌ ಗುರುವಾರ ಪ್ರಶ್ನಿಸಿದೆ.

ನೀಟ್ ಪ್ರಶ್ನೆಪತ್ರಿಕೆಗೆ 'ಸುಪ್ರೀಂ' ಪ್ರಶ್ನೆ

ದೇಶದಾದ್ಯಂತ ನಡೆಯುವ ಏಕರೂಪದ ಪರೀಕ್ಷೆಗೆ ಒಂದೇ ರೀತಿಯ ಪ್ರಶ್ನೆಪತ್ರಿಕೆಗಳು ಇರಬೇಕು ಎಂದು ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ನ್ಯಾಯಪೀಠ ಅಭಿಪ್ರಾಯ ಪಟ್ಟಿದೆ. ಅಲ್ಲದೆ ಮುಂದಿನ ವರ್ಷದಿಂದ ನೀಟ್‌ಗೆ ಎಲ್ಲ ಭಾಷೆಗಳಲ್ಲೂ ಒಂದೇ ಪ್ರಶ್ನೆಪತ್ರಿಕೆ ರೂಪಿಸುವ ವ್ಯವಸ್ಥೆಯನ್ನು ಹೇಗೆ ಅಭಿವೃದ್ಧಿ ಪಡಿಸುತ್ತೀರಿ ಎಂದೂ ನ್ಯಾಯಾಲಯ ಕೇಳಿದೆ.

ಈ ವರ್ಷದ ನೀಟ್ ಪರೀಕ್ಷೆಯಲ್ಲಿ ಸಿಬಿಎಸ್ಇ ವಿವಿಧ ಭಾಷೆಯ ಪತ್ರಿಕೆಗಳಲ್ಲಿ ವಿವಿಧ ಪ್ರಶ್ನೆಗಳನ್ನು ನೀಡಿತ್ತು, ಇಂಗ್ಲಿಷ್ ಭಾಷೆಯ ಪ್ರಶ್ನೆಪತ್ರಿಕೆಗೂ ಪ್ರಾದೇಶಿಕ ಭಾಷೆಯ ಪ್ರಶ್ನೆಪತ್ರಿಕೆಗೂ ಸಾಕಷ್ಟು ವ್ಯತ್ಯಾಸಗಳಿತ್ತು. ತಮಿಳು, ಗುಜರಾತಿ, ಬಂಗಾಳಿ ಸೇರಿದಂತೆ ಕೆಲವು ಪ್ರಾದೇಶಿಕ ಭಾಷೆ ಪತ್ರಿಕೆಗಳಿಗೂ, ಹಿಂದಿ ಭಾಷೆಯ ಪ್ರಶ್ನೆಗಳಿಗೂ ಭಿನ್ನತೆ ಇದೆ ಎಂದು ಆರೋಪಿಸಿ ತಮಿಳುನಾಡಿನ ವಿದ್ಯಾರ್ಥಿಗಳು ಕೋರ್ಟ್ ಮೆಟ್ಟಿಲೇರಿದ್ದು. ಈ ವಿಚಾರವಾಗಿ ಮದ್ರಾಸ್ ಹೈಕೋರ್ಟ್ ನೀಟ್ ಫಲಿತಾಂಶಕ್ಕೆ ತಡೆ ನೀಡಿತ್ತು. ಬಳಿಕ ಸುಪ್ರೀಂ ಕೋರ್ಟ್ ತಡೆಯನ್ನು ತೆರವುಗೊಳಿಸಿತ್ತು.

ಅರ್ಜಿದಾರರ ಪರವಾಗಿ ವಾದ ಮಾಡಿದ ಹಿರಿಯ ವಕೀಲರಾದ ಇಂದಿರಾ ಜೈಸಿಂಗ್‌, 2017ರ ನೀಟ್‌ನಲ್ಲಿ ಪ್ರಾದೇಶಿಕ ಭಾಷೆಗಳ ಪ್ರಶ್ನೆಪತ್ರಿಕೆಗಳಲ್ಲಿದ್ದ ಪ್ರಶ್ನೆಗಳು, ಹಿಂದಿ, ಇಂಗ್ಲಿಷ್‌ನ ಯಥಾವತ್‌ ಅನುವಾದವಾಗಿರಲಿಲ್ಲ ಎಂದು ಹೇಳಿದರು.

ಇದನ್ನು ಒಪ್ಪಿಕೊಂಡ ಹೆಚ್ಚುವರಿ ಸಾಲಿಸಿಟರ್‌ ಜನರಲ್‌, 'ಆದರೆ ಪ್ರಶ್ನೆಪತ್ರಿಕೆಗಳ ಕ್ಲಿಷ್ಟಕರ ಮಟ್ಟ ಒಂದೇ ರೀತಿಯದ್ದಾಗಿತ್ತು' ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಪ್ರಾದೇಶಿಕ ಭಾಷೆಗಳಲ್ಲಿ ನೀಟ್‌ ಬರೆಯುವ ಅಭ್ಯರ್ಥಿಗಳಿಗಾಗಿ ಬೇರೆ ಬೇರೆ ಪ್ರಶ್ನೆಪತ್ರಿಕೆಗಳನ್ನು ಸಿಬಿಎಸ್‌ಇ ಸಿದ್ಧಪಡಿಸುತ್ತಿರುವುದಕ್ಕೆ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಈ ಸಂಬಂಧ ಪ್ರಮಾಣಪತ್ರ ಸಲ್ಲಿಸುವಂತೆ ಸಿಬಿಎಸ್‌ಇ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಮನೀಂದರ್‌ ಸಿಂಗ್‌ಗೆ ಸೂಚಿಸಿದ ನ್ಯಾಯಪೀಠ, ಅಕ್ಟೋಬರ್‌ 10ಕ್ಕೆ ವಿಚಾರಣೆಯನ್ನು ಮುಂದೂಡಿದೆ.

For Quick Alerts
ALLOW NOTIFICATIONS  
For Daily Alerts

English summary
The Supreme Court has announced that there will be a common question paper for National Eligibility and Entrance Test (NEET) examinations in all languages.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X