ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್) ಮತ್ತು ಜಂಟಿ ಪ್ರವೇಶ ಪರೀಕ್ಷೆ(ಜೆಇಇ) ಮುಂದೂಡಲು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು, ಅದನ್ನು ತಳ್ಳಿಹಾಕಿರುವ ಸುಪ್ರೀಂ ಕೋರ್ಟ್, ಯುವಜನತೆಯ ವೃತ್ತಿಬದುಕನ್ನು ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.
ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಬೇಕೆಂದು 11 ರಾಜ್ಯದಿಂದ 11 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ಅರ್ಜಿಯನ್ನು ನಿರಾಕರಿಸಿದ್ದು, ಈಗಾಗಲೇ ನಿಗದಿಯಾಗಿರುವಂತೆ ಜೆಇಇ ಪರೀಕ್ಷೆ ಸೆಪ್ಟೆಂಬರ್ 1ರಿಂದ 6ರವರೆಗೆ, ನೀಟ್ ಪರೀಕ್ಷೆ ಸೆಪ್ಟೆಂಬರ್ 13ರವರೆಗೆ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಯಲಿದೆ.
For Quick Alerts
For Daily Alerts


Click it and Unblock the Notifications











