ಶಿಕ್ಷಣ ಮತ್ತು ವ್ಯವಸ್ಥೆ ಬಗ್ಗೆ ಸ್ವಾಮಿ ವಿವೇಕಾನಂದರ ಮಾತು

ಭವ್ಯ ಭಾರತದ ಕನಸನ್ನು ಕಂಡಿದ್ದ ಸ್ವಾಮಿ ವಿವೇಕಾನಂದರು ಶಿಕ್ಷಣ ಮಾತು ಯುವಕರ ಬಗ್ಗೆ ತಮ್ಮದೇ ಆದ ವಿಶಿಷ್ಟ ನಿಲುವನ್ನು ಹೊಂದಿದ್ದರು. ‘ಶಿಕ್ಷಣವು ಮಾನವನನ್ನು ಸೀಮಿತ ಸ್ತರದಿಂದ ಅಸೀಮ ಹಂತಕ್ಕೆ ಒಯ್ಯುವಂಥದ್ದು' ಎಂದಿದ್ದರು.

ಭವ್ಯ ಭಾರತದ ಕನಸನ್ನು ಕಂಡಿದ್ದ ಸ್ವಾಮಿ ವಿವೇಕಾನಂದರು ಶಿಕ್ಷಣ ಮಾತು ಯುವಕರ ಬಗ್ಗೆ ತಮ್ಮದೇ ಆದ ವಿಶಿಷ್ಟ ನಿಲುವನ್ನು ಹೊಂದಿದ್ದರು. ಸದಾ ಸಕಾರಾತ್ಮಕ ಚಿಂತನೆಗಳಿಂದ ಯುವಕರನ್ನು ಪ್ರೇರೇಪಿಸುತ್ತಿದ್ದ ಸ್ವಾಮೀಜಿ ತಾವು ಹೋದಲೆಲ್ಲಾ ಶಿಕ್ಷಣದ ಬಗ್ಗೆ ಹೇಳುತ್ತಿದ್ದರು. ದೈಹಿಕ ಶಿಕ್ಷಣ, ಮಾನಸಿಕ ಶಿಕ್ಷಣ, ಧಾರ್ಮಿಕ ಶಿಕ್ಷಣ, ಮಹಿಳಾ ಶಿಕ್ಷಣ, ಮೌಲ್ಯಾಧಾರಿತ ಶಿಕ್ಷಣದ ಬಗ್ಗೆ ಅವರು ಮಾತನಾಡುತ್ತಿದ್ದರು.

ರಾಷ್ಟ್ರೀಯ ಯುವ ದಿನ: ವಿವೇಕಾನಂದರ 155ನೇ ಜನ್ಮದಿನಾಚರಣೆರಾಷ್ಟ್ರೀಯ ಯುವ ದಿನ: ವಿವೇಕಾನಂದರ 155ನೇ ಜನ್ಮದಿನಾಚರಣೆ

ಸ್ವಾಮಿ ವಿವೇಕಾನಂದರೇ ಹೇಳುವಂತೆ ಶಿಕ್ಷಣವೆಂದರೆ 'ಮಾನವೀಯತೆಯ ವಿಕಾಸ, ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ. ಮನುಷ್ಯನ ವ್ಯಕ್ತಿತ್ವ ಶಿಕ್ಷಣದಿಂದ ಬಯಲಿಗೆ ಬರುತ್ತದೆ ಎಂದು ಹೇಳುತ್ತಿದ್ದ ವಿವೇಕಾನಂದರು 'ಭಾರತದ ಎಲ್ಲ ಸಮಸ್ಯೆಗಳಿಗೂ ಶಿಕ್ಷಣ ಒಂದೇ ಪರಿಹಾರ' ಎಂದು ನಂಬಿದ್ದರು.

ಸ್ವಾಮಿ ವಿವೇಕಾನಂದರ ಮಾತು

ಮಾನವ ಸಮಾಜದಲ್ಲಿ ಮನೆಮಾಡಿರುವ ವೈಯಕ್ತಿಕ ಹಾಗೂ ಸಾಮಾಜಿಕ ಸಮಸ್ಯೆಗಳಿಗೆ ಶಿಕ್ಷಣವೇ ಪರಿಹಾರ ಎಂಬುದು ವಿವೇಕಾನಂದರ ಅಭಿಮತ. 'ಶಿಕ್ಷಣವು ಮಾನವನನ್ನು ಸೀಮಿತ ಸ್ತರದಿಂದ ಅಸೀಮ ಹಂತಕ್ಕೆ ಒಯ್ಯುವಂಥದ್ದು' ಎಂದಿದ್ದಾರೆ ಸ್ವಾಮಿ ವಿವೇಕಾನಂದರು.

'ಶಿಕ್ಷಣವೆಂದರೆ ವ್ಯಕ್ತಿತ್ವ ನಿರ್ಮಾಣ, ವ್ಯಕ್ತಿತ್ವ ನಿರ್ಮಾಣದ ಮೂಲಕ ಚಾರಿತ್ರ್ಯ ನಿರ್ಮಾಣ; ಚಾರಿತ್ರ್ಯ ನಿರ್ಮಾಣದಿಂದ ಮಾತ್ರವೇ ರಾಷ್ಟ್ರನಿರ್ಮಾಣ' ಎಂಬ ಸ್ವಾಮಿ ವಿವೇಕಾನಂದರ ಅಭಿಪ್ರಾಯವು ಶಿಕ್ಷಣವು ಪ್ರಥಮತಃ ವ್ವಕ್ತಿಯ ಅಭ್ಯುದಯ ತದನಂತರ ಸಮಾಜ, ರಾಷ್ಟ್ರ ಹಾಗೂ ಅಂತಿಮವಾಗಿ ವಿಶ್ವದ ಶ್ರೇಯಸ್ಸಿಗೆ ಪ್ರೇರಕವಾಗುತ್ತದೆ ಎಂಬ ಸತ್ಯವನ್ನು ಸೂಚಿಸುತ್ತದೆ.

ಹೊಸಹೊಸ ಭಾವನೆಗಳನ್ನು ಸ್ವಭಾವ ಸಹಜವಾಗಿಸಿಕೊಳ್ಳುವುದನ್ನು ಶಿಕ್ಷಣ ಎಂದು ಮನಗಂಡಿದ್ದ ಅವರು ಪ್ರತಿಯೊಬ್ಬ ವ್ಯಕ್ತಿಯೂ ಚಾರಿತ್ರ್ಯ್ಷಮತೆಯನ್ನು ನೀಡುವ ಶಿಕ್ಷಣ ಮತ್ತು ಧರ್ಮಕ್ಕೆ ಮೊರೆಹೋಗಬೇಕೆಂಬ ಅಭಿಪ್ರಾಯ ನೀಡುತ್ತಾರೆ. 'ಉನ್ನತ ವಿಚಾರಗಳನ್ನು ವ್ಯಕ್ತಿಯೊಬ್ಬನಿಗೆ ನೀಡಿ ಆತನನ್ನು ಹುಲಿಯಾಗಿಸದಿದ್ದರೆ ಅವನು ಖಂಡಿತ ನರಿಯಾಗುತ್ತಾನೆ' ಎಂದು ಸ್ವಾಮೀಜಿ ಎಚ್ಚರಿಸುತ್ತಾರೆ. ಧರ್ಮ-ಸಂಸ್ಕೃತಿಗಳ ಅಧ್ಯಯನದ ಜೊತೆಗೆ ಪಾಶ್ಚಾತ್ಯ ವಿಜ್ಞಾನದ ಅಧ್ಯಯನಕ್ಕೆ ಸ್ವಾಮೀಜಿಯವರು ಒತ್ತು ನೀಡಲು ಕಾರಣ, ವಿಜ್ಞಾನ ವನ್ನು ಅಧ್ಯಯನಗೈಯ್ದು ಅಳವಡಿಸಿಕೊಳ್ಳುವುದರಿಂದ ಲೌಕಿಕ ಸಂಪತ್ತು ವೃದ್ಧಿಯಾಗುತ್ತದೆ ಎಂದು.

ಭಾರತದಾದ್ಯಂತ ಕಾಲ್ನಡಿಗೆಯಲ್ಲಿ ಸಂಚರಿಸಿ ದೇಶದ ಸ್ಥಿತಿಗತಿಗಳನ್ನು ಅಧ್ಯಯನ ಮಾಡುವಲ್ಲಿ ವಿವೇಕಾನಂದರು ಯಶಸ್ವಿಯಾದರು. ಪಾಶ್ಚಾತ್ಯ ಆಡಳಿತವೂ ಭಾರತದ ಆರ್ಥಿಕ ದುಃಸ್ಥಿತಿಗೆ ಕಾರಣವಾಗಿದ್ದಿತು. ಬಡವರು ಎಷ್ಟೇ ಶ್ರಮಜೀವಿಗಳಾದರೂ ಆರ್ಥಿಕವಾಗಿ ಮೇಲೇರದಂತೆ ಮಾಡುತ್ತಿದ್ದ ದಲ್ಲಾಳಿಗಳ ಕುಟಿಲ ತಂತ್ರಗಳನ್ನು ಅವರು ಗುರುತಿಸಿದ್ದರು.

ಕೃಷಿಕರಲ್ಲಿ, ಕಾರ್ವಿುಕ ವರ್ಗದಲ್ಲಿ ಆತ್ಮವಿಶ್ವಾಸವನ್ನು ಮೂಡಿಸಲು ಸರ್ವಪ್ರಯತ್ನಗೈದರು. ''ಜನಸಾಮಾನ್ಯರ ಬೆವರು, ಪರಿಶ್ರಮದಿಂದ ಬದುಕಿನಲ್ಲಿ ಮೇಲೇರಿ ಬಂದ ನಂತರ ಅವರನ್ನು ನಿರ್ಲಕ್ಷಿಸುವ ವಿದ್ಯಾವಂತರು ಎನಿಸಿಕೊಂಡವರನ್ನು ನಾನು ದೇಶದ್ರೋಹಿಗಳೆಂದೇ ಪರಿಗಣಿಸುತ್ತೇನೆ'' ಎಂದು ಸಮಾಜದ ವಿದ್ಯಾವಂತರನ್ನು ಛೇಡಿಸುತ್ತಾರೆ. ವಿದ್ಯಾವಂತರ ಮತ್ತು ಶ್ರೀಮಂತರ ಅವಿವೇಕವನ್ನು ಕಂಡು, "Give light to the poor, more light to the rich. Give light to uneducated and more light to educated" ಎನ್ನುತ್ತಾರೆ.

ಭಾರತೀಯರಿಗೆ ವ್ಯವಸಾಯವನ್ನು ಒಂದು ಉದ್ಯೋಗವಾಗಿ ರೂಪಿಸಿಕೊಳ್ಳಬೇಕೆಂದು ಸ್ವಾಮೀಜಿ ಕರೆ ಇತ್ತಿದ್ದಾರೆ. ಅವರು ನೀಡುವ ಭರವಸೆ ಅದ್ಭುತವಾಗಿದೆ- ''ಭಾರತೀಯ ಪ್ರಾಚೀನ ಋಷಿಗಳು ಕೃಷಿಕರಾಗಿದ್ದರು. ಆಧುನಿಕ ಜಗತ್ತಿನಲ್ಲಿ ಅಮೆರಿಕ ವ್ಯವಸಾಯವನ್ನು ಪ್ರಗತಿಪಥದಲ್ಲಿ ಒಯ್ದಿರುವುದು ಗಮನೀಯ ಅಂಶ. ಆಧುನಿಕ ಭಾರತವು ಕೃಷಿ ವಿಜ್ಞಾನವನ್ನು ಆಮೂಲಾಗ್ರವಾಗಿ ಅಧ್ಯಯನ ಮಾಡಿ ವ್ಯವಸಾಯದಲ್ಲಿ ಅಳವಡಿಸಬೇಕು. ಅವೈಜ್ಞಾನಿಕ ಪದ್ಧತಿಗಳಿಂದ ಕೃಷಿ ಉತ್ಪಾದನೆ ಕ್ಷೀಣಿಸುತ್ತಿದೆ. ಗ್ರಾಮೀಣ ಜನತೆ ಹಳ್ಳಿಗಾಡಿನ ಉತ್ತಮ ಪರಿಸರದಲ್ಲಿ ವ್ಯವಸಾಯವನ್ನು ಕೈಗೊಂಡು ಆರೋಗ್ಯದಿಂದ ನೆಮ್ಮದಿಯಿಂದ ಬದುಕಲು ಸಾಧ್ಯ'' ಎಂದಿದ್ದಾರೆ.

ವ್ಯವಸಾಯ ಕ್ಷೇತ್ರವನ್ನು ನಿರ್ಲಕ್ಷಿಸದಂತೆ ಜನಸಾಮಾನ್ಯರನ್ನು ಕೋರಿದ ಸ್ವಾಮೀಜಿ, ವಿಜ್ಞಾನದ ಅಧ್ಯಯನದಿಂದ ರಾಷ್ಟ್ರದ ಔದ್ಯೋಗಿಕ ಕ್ಷೇತ್ರವನ್ನು ಬೆಳೆಸಿ ಲೌಕಿಕ ಸಂಪತ್ತನ್ನು ಗಳಿಸಬಹುದೆಂದು ತಿಳಿವಳಿಕೆ ನೀಡಿದರು. ಅಮೆರಿಕ ಪ್ರವಾಸ ಸಂದರ್ಭದಲ್ಲಿ ಹಡಗಿನಲ್ಲಿ ಭೇಟಿಯಾದ ಶ್ರೀಮಂತರಾದ ಜೆಮ್ ಶೇಠ್​ಜೀ ಟಾಟಾರವರಿಗೆ ಭಾರತದಲ್ಲಿ ಕೈಗಾರಿಕೆ ಉದ್ದಿಮೆಯನ್ನು ಮತ್ತು ವಿಜ್ಞಾನ ಸಂಶೋಧನಾ ಕೇಂದ್ರಗಳನ್ನು ಸ್ಥಾಪಿಸಲು ಮನವಿ ಮಾಡಿದರು.

(-ಸ್ವಾಮಿ ವೀರೇಶಾನಂದ ಸರಸ್ವತೀ, ತುಮಕೂರು ರಾಮಕೃಷ್ಣ-ವಿವೇಕಾನಂದ ಆಶ್ರಮದ ಅಧ್ಯಕ್ಷರು)

For Quick Alerts
ALLOW NOTIFICATIONS  
For Daily Alerts

English summary
Swami Vivekananda puts lot of emphasis on physical education, moral and religious education, Medium of language in education, women education and education for weaker sections of society.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X