Pre-Examination Training Of JEE/NEET for SC/ST : ಸಮಾಜ ಕಲ್ಯಾಣ ಇಲಾಖೆಯ ಉಚಿತ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

2021-22ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಜೆಇಇ ಮತ್ತು ನೀಟ್‌ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 24 ಮತ್ತು 10 ತಿಂಗಳುಗಳ ಆನ್‌ಲೈನ್ ತರಬೇತಿಗೆ ಆಸಕ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯಿಂದ ಜೆಇಇ ಮತ್ತು ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಜೆಇಇ ಮತ್ತು ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 24 ಮತ್ತು 10 ತಿಂಗಳುಗಳ ಆನ್‌ಲೈನ್ ತರಬೇತಿಗೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಬಂದಂತಹ ಅರ್ಜಿಗಳನ್ನು ನಿಗಧಿತ ಗುರಿಗನುಗುಣವಾಗಿ ವಿದ್ಯಾರ್ಥಿಗಳ 10ನೇ ತರಗತಿಗಳಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿ ತರಬೇತಿಗೆ ನಿಯೋಜಿಸಲಾಗುವುದು.

ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ (2021-22) ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ದ್ವಿತೀಯ ಪಿಯುಸಿ ಮುಕ್ತಾಯದವರೆಗೂ 24 ತಿಂಗಳು ಅಥವಾ 2023ರ ಏಪ್ರಿಲ್/ಮೇ ಮಾಹೆಯಲ್ಲಿ ನಡೆಯಲಿರುವ ಜೆಇಇ/ನೀಟ್ ಪ್ರವೇಶ ಪರೀಕ್ಷೆಯವರೆಗೂ ಹಾಗೂ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ 10 ತಿಂಗಳು ಅಥವಾ 2022ರ ಏಪ್ರಿಲ್/ಮೇ ಮಾಹೆಯಲ್ಲಿ ನಡೆಯಲಿರುವ ಜೆಇಇ/ನೀಟ್ ಪ್ರವೇಶ ಪರೀಕ್ಷೆಯವರೆಗೂ ಆನ್‌ಲೈನ್ ತರಬೇತಿ ನೀಡಲಾಗುವುದು.

ಜೆಇಇ ಮತ್ತು ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 24 ಮತ್ತು 10 ತಿಂಗಳುಗಳ ಆನ್‌ಲೈನ್ ತರಬೇತಿಯ ಅವಧಿ, ಶೈಕ್ಷಣಿಕ ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳು ಹೀಗಿವೆ.

ಕೋರ್ಸ್ ನ ವಿವರ:

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಜೆಇಇ ಮತ್ತು ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 24 ಮತ್ತು 10 ತಿಂಗಳುಗಳ ಆನ್‌ಲೈನ್ ತರಬೇತಿ ಇದಾಗಿದೆ.

ತರಬೇತಿ ಅವಧಿ:

ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿ ದಿನ ಎರಡು ಗಂಟೆಯಂತೆ 24 ತಿಂಗಳು ಅಥವಾ 2023ರ ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಒಟ್ಟು 1200 ರಿಂದ 1300 ಗಂಟೆಗಳ ತರಬೇತಿ ನೀಡಲಾಗುತ್ತದೆ.

ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಪ್ರತಿ ದಿನ 2 ಗಂಟೆಯಂತೆ 10 ತಿಂಗಳು ಅಥವಾ 2022ರ (ಜೆ.ಇ.ಇ/ನೀಟ್ ಪ್ರವೇಶ ಪರೀಕ್ಷೆವರೆಗೂ) ಕನಿಷ್ಟ 550 ರಿಂದ 600 ಗಂಟೆಗಳ ತರಬೇತಿ ನೀಡಲಾಗುತ್ತದೆ.

ವಯೋಮಿತಿ:

ಈ ತರಬೇತಿ ಪಡೆಯಲು ಕನಿಷ್ಟ 16 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿರಬೇಕು.

ವಿದ್ಯಾರ್ಹತೆ:

ಅಭ್ಯರ್ಥಿಯು 10ನೇ ತರಗತಿಯಲ್ಲಿ ಉತ್ತಿರ್ಣರಾಗಿರಬೇಕು.

ಅಭ್ಯರ್ಥಿಯ ಸಾಮಾನ್ಯ ಅರ್ಹತೆಗಳು:

ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರತಕ್ಕದ್ದು.
ಕರ್ನಾಟಕ ರಾಜ್ಯದ ಅನುಸೂಚಿತ ಜಾತಿ ಮತ್ತು ಅನುಸೂಚಿತ ವರ್ಗಕ್ಕೆ ಸೇರಿದ ಜಾತಿ ಪಟ್ಟಿಯಲ್ಲಿರುವ ಜಾತಿಗೆ ಸೇರಿಸತಕ್ಕದ್ದು.
ಕುಟುಂಬದ ವಾರ್ಷಿಕ ಆದಾಯ ರೂ.5.00 ಲಕ್ಷಗಳ ಒಳಗಿರತಕ್ಕದ್ದು.
ಅಭ್ಯರ್ಥಿಯು ಕನಿಷ್ಟ 16 ರಿಂದ 40 ವರ್ಷದೊಳಗಿರತಕ್ಕದ್ದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗೆ ಆಧಾರ್‌ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರತಕ್ಕದ್ದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ ವೆಬ್‌ಸೈಟ್ : https://sw.kar.nic.in/JEENEETCoaching/home.aspx

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 30,2021

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದವರೆಗೂ ವಿಳಂಬ ಮಾಡದೇ ಮುಂಚಿತವಾಗಿ ಅರ್ಜಿಗಳನ್ನು ಸಲ್ಲಿಸತಕ್ಕದ್ದು.

ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Social welfare department 2021 invited applications from sc and st candidates for pre-examination training for jee and neet exams.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+