ಸಿಂಡಿಕೇಟ್ ಬ್ಯಾಂಕ್ ಸ್ಟೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕಾತಿಯ ಸಂದರ್ಶನ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಸಿಂಡಿಕೇಟ್ ಬ್ಯಾಂಕ್ ಒಟ್ಟು 129 ಸ್ಟೆಷಲಿಸ್ಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಏಪ್ರಿಲ್ 18,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಸಂದರ್ಶನ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂದರ್ಶನ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದ್ದು, ಜೂನ್ 5 ರಿಂದ ಜೂನ್ 13,2019 ರೊಳಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವ ಅವಕಾಶ ನೀಡಲಾಗಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪಡೆಯಲು ಕೆಳಗೆ ನೀಡಲಾಗಿರುವ ಸ್ಟೆಪ್ಸ್ ಫಾಲೋ ಮಾಡಿ.
ಸಿಂಡಿಕೇಟ್ ಬ್ಯಾಂಕ್ ಸ್ಟೆಷಲಿಸ್ಟ್ ಆಫೀಸರ್ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ಪಡೆಯಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಅಭ್ಯರ್ಥಿಗಳು ಸಿಂಡಿಕೇಟ್ ಬ್ಯಾಂಕ್ನ ಅಧಿಕೃತ ವೆಬ್‌ಸೈಟ್ https://www.syndicatebank.in/english/home.aspx ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "Career" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಅಭ್ಯರ್ಥಿಗಳು "Recruitment of Specialist Officers" ನ ಮುಂದಿರುವ "Interview Call Letter" ನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಷನ್ ನಂಬರ್ ಮತ್ತು ಪಾಸ್‌ವರ್ಡ್ / ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣಿಸುತ್ತದೆ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.
ಅಭ್ಯರ್ಥಿಗಳು ಸಂದರ್ಶನಕ್ಕೆ ಹೋಗುವಾಗ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಿ ಹಾಗೂ ಸಂದರ್ಶನದ ಬಗೆಗೆ ಹೆಚ್ಚಿನ ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಓದಿಕೊಳ್ಳಿ.
ಅಭ್ಯರ್ಥಿಗಳು ನೇರವಾಗಿ ಸಂದರ್ಶನ ಪ್ರವೇಶ ಪತ್ರ ಪಡೆಯಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











