ಟಾಟಾ ಬಿಲ್ಡಿಂಗ್ ಇಂಡಿಯಾ ಸ್ಕೂಲ್ ಪ್ರಬಂಧ ಸ್ಪರ್ಧೆ 2017-18

ಟಾಟಾ ಗ್ರೂಪ್ ನ 'ಟಾಟಾ ಬಿಲ್ಡಿಂಗ್ ಇಂಡಿಯಾ ಸ್ಕೂಲ್ ಪ್ರಬಂಧ ಸ್ಪರ್ಧೆ '12 ಸರಣಿಯು ಬೆಂಗಳೂರಿನ ವಿಸ್ಡಂ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಡೆಯಲಿದೆ.

2017-18 ನೇ ಸಾಲಿನ ಈ ಸ್ಪರ್ಧೆಯಲ್ಲಿ ಬೆಂಗಳೂರಿನ 80 ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ನ್ಯೂ ಇಂಡಿಯಾ @ 70 ಅಂಡ್ ಯುವರ್ ಕಾಂಟ್ರಿಬ್ಯೂಷನ್' ಈ ವರ್ಷದ ಪ್ರಬಂಧದ ವಿಷಯ. ಈ ಪ್ರಬಂಧ ಸ್ಪರ್ಧೆ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಯಲ್ಲೂ ಇರಲಿದೆ.

ಟಿಡಿಎಸ್ ನಲ್ಲಿ ದಾಖಲಾಗಲಿದೆ ಎಲ್ಲಾ ಶಿಕ್ಷಕರ ಮಾಹಿತಿ

ಟಾಟಾ ಬಿಲ್ಡಿಂಗ್ ಇಂಡಿಯಾ ಭಾರತದ ಅತಿ ದೊಡ್ಡ ಶಾಲಾ ಮಟ್ಟದ ಪ್ರಬಂಧ ಸ್ಪರ್ಧೆಯಾಗಿದೆ. ಎರಡು ಹಂತದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ 250 ಕ್ಕೂ ಹೆಚ್ಚು ನಗರಗಳ 9,500 ಕ್ಕೂ ಹೆಚ್ಚು ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಇಂಗ್ಲೀಷ್, ಹಿಂದಿ, ಬೆಂಗಾಲಿ, ಗುಜರಾತಿ, ತಮಿಳು, ಮರಾಠಿ, ಕನ್ನಡ, ಒರಿಯಾ, ತೆಲುಗು, ಮಲಯಾಳಂ, ಪಂಜಾಬಿ, ಅಸ್ಸಾಮೀಸ್ ಮತ್ತು ಉರ್ದು ಭಾಷೆಗಳಲ್ಲಿ ನಡೆಯಲಿದೆ.

ಟಾಟಾ ಬಿಲ್ಡಿಂಗ್ ಇಂಡಿಯಾ ಸ್ಕೂಲ್ ಪ್ರಬಂಧ ಸ್ಪರ್ಧೆ

 

ಈ ಸ್ಪರ್ಧೆ ಎರಡು ವಿಭಾಗಗಳಲ್ಲಿ ನಡೆಯಲಿದೆ.

1. ಜೂನಿಯರ್ ಹಂತ: ಈ ವಿಭಾಗದಲ್ಲಿ 6 ರಿಂದ 8 ನೇ ತರಗತಿಯ ಮಕ್ಕಳು ಪಾಲ್ಗೊಳ್ಳಲಿದ್ದರೆ

2. ಸೀನಿಯರ್ ಹಂತ: ಇದರಲ್ಲಿ 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳು ಸ್ಪರ್ಧಿಸಲಿದ್ದಾರೆ.

ಮಕ್ಕಳು ಬರೆದ ಪ್ರಬಂಧವನ್ನು ಅವರು ತೆಗೆದುಕೊಂಡಿರುವ ವಿಷಯ, ಅದರ ಸಂರಚನೆ, ಸೃಜನಶೀಲತೆ, ಕಲ್ಪನೆ ಆಧಾರದ ಮೇಲೆ ಮೌಲ್ಯಮಾಪನ ಮಾಡಲಾಗುತ್ತದೆ. ಶಾಲೆ, ನಗರ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಜಯಶಾಲಿಯಾದವರಿಗೆ ಬಹುಮಾನಗಳನ್ನು ವಿತರಿಸಲಾಗುತ್ತದೆ.

ವಿಜೇತರಿಗೆ ರಾಷ್ಟ್ರಪತಿ ಭೇಟಿ ಅವಕಾಶ

ರಾಷ್ಟ್ರ ಮಟ್ಟದಲ್ಲಿ ವಿಜೇತರಾದವರು ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿರುವ ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡುವ ಸುವರ್ಣವಕಾಶವೂ ಲಭ್ಯವಾಗಲಿದೆ. ಇಷ್ಟೇ ಅಲ್ಲದೇ, ರಾಷ್ಟ್ರಪತಿ ಸೇರಿದಂತೆ ಮತ್ತಿತರ ಗಣ್ಯಾತಿಗಣ್ಯರನ್ನು ಭೇಟಿ ಮಾಡುವ ಸೌಭಾಗ್ಯವೂ ದೊರಕಲಿದೆ.

ಕಳೆದ ಹಲವು ವರ್ಷಗಳಿಂದ ನಡೆಯುತ್ತಾ ಬಂದಿರುವ ಈ ಟಾಟಾ ಬಿಲ್ಡಿಂಗ್ ಇಂಡಿಯಾ ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರ ಹಾಕಲು ಉತ್ತಮ ವೇದಿಕೆಯನ್ನು ಒದಗಿಸಿಕೊಡಲಾಗುತ್ತಾ ಬರಲಾಗಿದೆ. ಉತ್ತಮ ಭಾರತಕ್ಕಾಗಿ ಡಿಜಿಟಲ್ ತಂತ್ರಜ್ಞಾನ, ಸ್ವಚ್ಛ ಭಾರತ, ಜಾಗತಿಕ ತಾಪಮಾನ ಮತ್ತು ಹವಾಮಾನ ಬದಲಾವಣೆ ಸೇರಿದಂತೆ ಮತ್ತಿತರೆ ಪ್ರಮುಖ ವಿಷಯಗಳ ಬಗ್ಗೆ ಈ ಹಿಂದೆ ಸ್ಪರ್ಧೆ ಏರ್ಪಡಿಸಲಾಗಿತ್ತು.

2006 ರಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಆರಂಭವಾದ ಈ ಟಾಟಾ ಬಿಲ್ಡಿಂಗ್ ಇಂಡಿಯಾ ಶಾಲಾ ಪ್ರಬಂಧ ಸ್ಪರ್ಧೆ ಪ್ರತಿವರ್ಷ ನಡೆಯುತ್ತಾ ಬಂದಿದೆ. ಈ ಮೂಲಕ ದೇಶದೆಲ್ಲೆಡೆ ಯುವ ಸಮುದಾಯವನ್ನು ಪ್ರಚಲಿತ ವಿದ್ಯಮಾನಗಳ ಬಗ್ಗೆ ಆಸಕ್ತಿ ತೋರುವಂತೆ ಪ್ರೇರೇಪಿಸಿ, ಅವರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಅಲ್ಲದೇ, ಸದೃಢವಾದ ದೇಶ ನಿರ್ಮಾಣಕ್ಕೆ ಅಣಿಗೊಳಿಸುವ ಪ್ರಯತ್ನ ಇದಾಗಿದೆ. ಈ ವೇದಿಕೆಯಲ್ಲಿ ಸ್ಪರ್ಧಿಗಳು ತಮ್ಮ ಪ್ರಬಂಧಗಳ ಮೂಲಕ ಸದೃಢ ದೇಶ ನಿರ್ಮಾಣಕ್ಕೆ ಅಗತ್ಯವಾದ ಸಲಹೆಗಳು ಮತ್ತು ಅಭಿಪ್ರಾಯಗಳನ್ನು ನೀಡಬಹುದಾಗಿದೆ. ಇದರ ಜತೆಗೆ ಟಾಟಾ ಕ್ಲಾಸ್‍ಎಡ್ಜ್ (ತಂತ್ರಜ್ಞಾನ ಆಧಾರಿತ ಸ್ಪರ್ಧೆ) ಅನ್ನೂ ಟಾಟಾ ಬಿಲ್ಡಿಂಗ್ ಇಂಡಿಯಾ ಪ್ರಬಂಧ ಸ್ಪರ್ಧೆಯನ್ನೂ ತಮ್ಮ ಶಾಲೆಗಳಲ್ಲಿ ನಡೆಸಬಹುದಾಗಿದೆ.

For Quick Alerts
ALLOW NOTIFICATIONS  
For Daily Alerts

English summary
TATA Building India's Essay competition 2017-18. The competion will be organised in Wisdom international school Bengaluru, This year's New India 70 and your contribution is the topic.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Careerindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Careerindia website. However, you can change your cookie settings at any time. Learn more