ಹತ್ತನೇ ತರಗತಿ ವಿದ್ಯಾರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ಪಾಸ್ ಮಾಡಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ.

ದೇಶದೆಲ್ಲೆಡೆ ವ್ಯಾಪಕವಾಗಿ ಕೊರೋನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಹತ್ತನೇ ತರಗತಿ (ಎಸ್‌ಎಸ್‌ಎಲ್‌ಸಿ) ಬೋರ್ಡ್ ಪರೀಕ್ಷೆಯನ್ನು ರದ್ದು ಮಾಡಿ ವಿದ್ಯಾರ್ಥಿಗಳನ್ನು ಮುಂದಿತ ತರಗತಿಗೆ ಪಾಸ್ ಮಾಡಲು ತೆಲಂಗಾಣದ ಮುಖ್ಯಮಂತ್ರಿಕ ಚಂದ್ರಶೇಖರ್ ರಾವ್ ನಿನ್ನೆ ಘೋಷಣೆ ಮಾಡಿದ್ದಾರೆ.
ತೆಲಂಗಾಣದಲ್ಲಿ ಈ ವರ್ಷ 5,34,903 ವಿದ್ಯಾರ್ಥಿಗಳು ಹತ್ತನೇ ತರಗತಿ ಪರೀಕ್ಷೆ ಬರೆಯಲಿದ್ದರು. ಆದರೆ ಈ ವರ್ಷ ಪರೀಕ್ಷೆ ಇಲ್ಲದ ಕಾರಣ ಎಲ್ಲರನ್ನೂ ಪಾಸ್ ಮಾಡಲಾಗುತ್ತಿದೆ. ಹತ್ತನೇ ತರಗತಿ ವಿದ್ಯಾರ್ಥಿಗಳ ಇಂಟರ್ನಲ್ ಗ್ರೇಡ್ ಆಧಾರದ ಮೇಲೆ ಅಂಕ ನೀಡಿ ಪಾಸ್ ಮಾಡಲು ತೆಲಂಗಾಣದ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.
ಅಲ್ಲದೆ, ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳ ಬಗ್ಗೆ ಪರಿಸ್ಥಿತಿ ಅವಲೋಕಿಸಿ ಮುಂದಿನ ದಿನಗಳಲ್ಲಿ ನಿರ್ಧಾರ ತೆಗೆದುಕೊಳ್ಳಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಕಟಣೆ ತಿಳಿಸಿದೆ.
For Quick Alerts
For Daily Alerts
English summary
Telangana government decides to promote sslc students to next class not to conduct sslc exam.
Story first published: Tuesday, June 9, 2020, 16:57 [IST]


Click it and Unblock the Notifications