2021ನೇ ಸಾಲಿನಿಂದ ಸೈನಿಕ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಪ್ರವೇಶ

2021-22ನೇ ಶೈಕ್ಷಣಿಕ ಸಾಲಿನಿಂದ ವಿದ್ಯಾರ್ಥಿನಿಯರಿಗಾಗಿ ಸೈನಿಕ ಶಾಲೆಗಳನ್ನು ತೆರೆಯಲಾಗುವುದು. ಇನ್ನು ಮುಂದೆ ವಿದ್ಯಾರ್ಥಿನಿಯರಿಗೂ ಸೇನಾ ತರಬೇತಿಯನ್ನು ನೀಡಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಸೈನಿಕ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಪ್ರವೇಶ

ಎರಡು ವರ್ಷಗಳ ಹಿಂದೆ ಮಿಜೋರಾಂನ ಛಿಂಗ್‌ಛಿಪ್ ಸೈನಿಕ ಶಾಲೆಯಲ್ಲಿ ರಕ್ಷಣಾ ಸಚಿವಾಲಯವು ವಿದ್ಯಾರ್ಥಿನಿಯರಿಗೆ ಪ್ರವೇಶ ಕಲ್ಪಿಸಿತ್ತು. ಈ ಯಶಸ್ವಿ ಯೋಜನೆಯ ಹಿನ್ನೆಲೆಯಲ್ಲಿ ಉಳಿದ ಸೈನಿಕ ಶಾಲೆಗಳಲ್ಲೂ ವಿದ್ಯಾರ್ಥಿನಿಯರಿಗೆ ಪ್ರವೇಶ ನೀಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ವಿದ್ಯಾರ್ಥಿನಿಯರಿಗೂ ಸೇನಾ ತರಬೇತಿಯನ್ನು ನೀಡುವುದರಿಂದ ಲಿಂಗ ಸಮಾನತೆ ಸಾಧಿಸುವುದು ಮತ್ತು ಸೇನಾ ಪಡೆಗಳಲ್ಲಿ ಮಹಿಳೆಯರಿಗೆ ಆದ್ಯತೆ ನೀಡುವ ಮತ್ತು ಪ್ರಧಾನಿ ನರೇಂದ್ರ ಮೋದಿಯವರ 'ಬೇಟಿ ಬಚಾವೊ ಬೇಟಿ ಪಡಾವೊ' ಧ್ಯೇಯವಾಕ್ಯವನ್ನು ಬಲಪಡಿಸುವ ಉದ್ದೇಶದಿಂದ ಈ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಸೈನಿಕ ಶಾಲೆಗಳಲ್ಲಿ ವಿದ್ಯಾರ್ಥಿನಿಯರ ಅಗತ್ಯಕ್ಕೆ ತಕ್ಕಂತೆ ಮಹಿಳಾ ಸಿಬ್ಬಂದಿಯನ್ನು ನೇಮಿಸಿಕೊಳ್ಳುವುದು ಮತ್ತು ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ರಕ್ಷಣಾ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

More News  

For Quick Alerts
ALLOW NOTIFICATIONS  
For Daily Alerts

English summary
The sainik school starts admissions to girls from 2021 said by union defence minister rajnath singh.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+