ಯುಜಿ ಎನ್ಇಇಟಿ/ನೀಟ್ 2020 ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಲಾಗಿದೆ.
2020-21ನೇ ಸಾಲಿಗೆ ವೈದ್ಯಕೀಯ /ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶ ಯುಜಿ ನೀಟ್ 2020 ರಲ್ಲಿ ಅರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಧಿಯನ್ನು ವಿಸ್ತರಿಸಲಾಗಿದೆ.
ಅಭ್ಯರ್ಥಿಗಳಿಗೆ ಯುಜಿ ನೀಟ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ನವೆಂಬರ್ 12,2020 ಮಧ್ಯಾಹ್ನ 2ರ ವರೆಗೆ ಮತ್ತು ಶುಲ್ಕ ಪಾವತಿಸಲು ನವೆಂಬರ್ 12,2020ರ ಸಂಜೆ 5:30ರವರೆಗೆ ವಿಸ್ತರಿಸಲಾಗಿದೆ.
ಎಸ್ಸಿ/ಎಸ್ಟಿ/ಓಬಿಸಿ ಅರ್ಹತಾ ಮಾನದಂಡಗಳು ಕರ್ನಾಟಕ ಎಸ್ಸಿ/ಎಸ್ಟಿ/ಓಬಿಸಿ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ.
ನೊಂದಣಿ ಮಾಡುವ ವಿಧಾನ ಹಾಗೂ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
For Quick Alerts
For Daily Alerts