ಯುಜಿಸಿ ಆರ್ಥಿಕವಾಗಿ ಹಿಂದುಳಿದವರಿಗೆ 10%ರಷ್ಟು ಮೀಸಲಾತಿ ನೀಡಲು ರಾಜ್ಯದ ವಿಶ್ವವಿದ್ಯಾಲಯಗಳಿಗೆ ನಿರ್ದೇಶಿಸಿದೆ

ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಶೇ 10 ರಷ್ಟು ಮೀಸಲಾತಿ ನೀಡುವ ಯೋಜನೆಯನ್ನು ಕೂಡಲೇ ಜಾರಿಗೆ ತರಬೇಕೆಂದು ಅಖಿಲ ಭಾರತ ರಾಜ್ಯ ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ ಸೂಚನೆಯನ್ನು ನೀಡಿದೆ.

ಆರ್ಥಿಕವಾಗಿ ಹಿಂದುಳಿದವರಿಗೆ 10%ರಷ್ಟು ಮೀಸಲಾತಿ ನೀಡಲು ನಿರ್ದೇಶಿಸಿದ ಯುಜಿಸಿ

 

ರಾಜ್ಯ ಸರಕಾರದಿಂದ ನೇರವಾಗಿ ಅಥವಾ ಪರೋಕ್ಷವಾಗಿ ಅನುದಾನ ಪಡೆಯುವ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳ ಪ್ರವೇಶಾತಿಯಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ ಮೀಸಲಾತಿ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಯುಜಿಸಿಯ ಹೆಚ್ಚುವರಿ ಕಾರ್ಯದರ್ಶಿ ಡಾ.ದೇವ್‌ ಸ್ವರೂಪ್‌ ಎಲ್ಲ ವಿವಿಗಳ ಕುಲಪತಿಗಳಿಗೆ ಸೂಚನೆ ನೀಡಿದ್ದಾರೆ.

ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇಕಡಾ 10 ರಷ್ಟು ಮೀಸಲಾತಿ ನೀಡುವಂತೆ ಕೇಂದ್ರ ಸರ್ಕಾರ ಇತ್ತೀಚೆಗೆ ತಿದ್ದುಪಡಿ ತಂದಿತು. ಈ ಹಿನ್ನೆಲೆಯಲ್ಲಿ ಯುಜಿಸಿ ಈ ಹೊಸ ಮೀಸಲಾತಿ ವ್ಯವಸ್ಥೆಯನ್ನು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ (2019-20) ಜಾರಿಗೆ ತರಲು ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯ ಸರ್ಕಾರಿ ವಿಶ್ವವಿದ್ಯಾಲಯಗಳಿಗೆ ಸೂಚನೆ ನೀಡಿದೆ.

ಯಾವ ವಿವಿಗಳು ಪಟ್ಟಿಯಲ್ಲಿವೆ ?

ಕರ್ನಾಟಕದ ಬೆಂಗಳೂರು, ದಾವಣಗೆರೆ, ಕಲಬುರಗಿ, ಮಂಗಳೂರು, ತುಮಕೂರು, ಮೈಸೂರು ವಿವಿ, ಹಂಪಿ ಕನ್ನಡ ವಿವಿ, ವಿಜಯಪುರದ ಕರ್ನಾಟಕ ಮಹಿಳಾ ವಿವಿ, ಧಾರವಾಡದ ಕರ್ನಾಟಕ ವಿವಿ, ಶಿವಮೊಗ್ಗದ ಕುವೆಂಪು ವಿವಿ,ವಿಶ್ವವಿದ್ಯಾಲಯ, ಬೆಂಗಳೂರಿನ ನ್ಯಾಷನಲ್‌ ಲಾ ಸ್ಕೂಲ್‌ ಆಫ್‌ ಇಂಡಿಯಾ ಯೂನಿವರ್ಸಿಟಿ ಯುಜಿಸಿ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿದೆ.

For Quick Alerts
ALLOW NOTIFICATIONS  
For Daily Alerts

English summary
The university grant commission (UGC) asked all universities in the country to implement 10% reservation for EWS from this year.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X