
ದೇಶದೆಲ್ಲೆಡೆ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ಯುಜಿಸಿ ಎನ್‌ಇಟಿ 2021 ಮೇ ಪರೀಕ್ಷೆಯನ್ನು ಮುಂದೂಡಲಾಗಿದೆ. ಯುಜಿಸಿ ಎನ್‌ಇಟಿ ಪರೀಕ್ಷೆಯನ್ನು ಮೇ 2,2021 ರಿಂದ ಮೇ 17,2021ರ ವರೆಗೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಕೊರೋನಾ ಕಾರಣದಿಂದಾಗಿ ಪರೀಕ್ಷೆಯನ್ನು ಮುಂದೂಡಲು ಎನ್‌ಟಿಎ ನಿರ್ಧರಿಸಿದೆ.
ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಎನ್‌ಟಿಎ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು 15 ದಿನಗಳ ಮುಂಚಿತವಾಗಿಯೇ ವಿದ್ಯಾರ್ಥಿಗಳಿಗೆ ತಿಳಿಸಲಾಗಿದೆ. ಹಾಗಾಗಿ ವಿದ್ಯಾರ್ಥಿಗಳು ಆಗಾಗ್ಗೆ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡುತ್ತಿರತಕ್ಕದ್ದು.
ಕೊರೋನಾ ಹಿನ್ನೆಲೆಯಲ್ಲಿ ಈಗಾಗಲೇ ಅನೇಕ ಪರೀಕ್ಷೆಗಳು ರದ್ದುಗೊಂಡಿವೆ. ಇನ್ನೂ ಕೆಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಹಾಗಾಗಿ ವಿದ್ಯಾರ್ಥಿಗಳು ಆತಂಕ ಪಡದೆ ಪರೀಕ್ಷೆಗೆ ಸಿದ್ದತೆಯನ್ನು ನಡೆಸುತ್ತಾ ಆಗಾಗ್ಗೆ ಅಧಿಕೃತ ವೆಬ್‌ಸೈಟ್ ನಿಂದ ಮಾಹಿತಿ ಪಡೆಯುತ್ತಿರತಕ್ಕದ್ದು.
For Quick Alerts
For Daily Alerts


Click it and Unblock the Notifications











