UGC NET Phase IV Admit Card 2022 : ಯುಜಿಸಿ ಎನ್‌ಇಟಿ ಅ.12ರ ಫೇಸ್ IVರ ಪ್ರವೇಶ ಪತ್ರ ಔಟ್

ದಿ ನ್ಯಾಷನಲ್ ಟೆಟ್ಸಿಂಗ್ ಏಜೆನ್ಸಿಯು ಅಕ್ಟೋಬರ್ 12,2022ರಂದು ನಡೆಯಲಿರುವ ನಾಲ್ಕನೇ ಹಂತದ ಯುಜಿಸಿ ಎನ್‌ಇಟಿ ಡಿಸೆಂಬರ್ 2021 ಮತ್ತು ಜೂನ್ 2022ರ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗಾಗಿ ಯುಜಿಸಿ ಎನ್‌ಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಗಳಿಗೆ ನೊಂದಾಯಿಸಿಕೊಂಡ ಅಭ್ಯರ್ಥಿಗಳು ಈಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದು.

ಪರೀಕ್ಷಾ ವೇಳಾಪಟ್ಟಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ಪರೀಕ್ಷೆ ಬರೆಯುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಪಡೆಯಬಹುದಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎನ್‌ಟಿಎ ಯುಜಿಸಿ ಎನ್‌ಇಟಿ ಫೇಸ್ IVರ ಪ್ರವೇಶ ಪತ್ರ ಪ್ರಕಟ

ಯುಜಿಸಿ ಎನ್‌ಇಟಿ ಫೇಸ್ IVರ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://ugcnet.nta.nic.in/ ಗೆ ಭೇಟಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಫೇಸ್ IVರ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟ ತೆರೆಯುತ್ತದೆ ಅಲ್ಲಿ ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು
ಸ್ಟೆಪ್ 5:ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡ ಬಳಿಕ ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಮಾಹಿತಿಯನ್ನು ಕಡ್ಡಾಯವಾಗಿ ಓದಿಕೊಳ್ಳಬೇಕು. ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕಿದ್ದು, ಫೇಸ್‌ ಮಾಸ್ಕ್, ಹ್ಯಾಂಡ್‌ಸ್ಯಾನಿಟೈಸರ್ ಮತ್ತು ಫೇಸ್‌ಶೀಲ್ಡ್‌ ಬಳಸಬೇಕಿರುತ್ತದೆ.

ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
NTA released UGC NET december 2021 and june 2022 phase IV exam admit card. Here is how to do download it.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X