ಯುಜಿಸಿ ಎನ್ಇಟಿ 2017: ಫಲಿತಾಂಶ ಪ್ರಕಟ

ಯುಜಿಸಿ ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಲಾಗಿದ್ದು, ಒಟ್ಟು 84 ವಿಷಯಗಳ ಪ್ರಶ್ನೆಪತ್ರಿಕೆಗಳಿಗೆ ಅಂತಿಮ ಕೀ ಉತ್ತರಗಳನ್ನು ಸಹ ಪ್ರಕಟಿಸಲಾಗಿದೆ.

ಯುಜಿಸಿ ಎನ್ಇಟಿ 2017 ರ ಫಲಿತಾಂಶ ಪ್ರಕಟಗೊಂಡಿದ್ದು, ಅಭ್ಯರ್ಥಿಗಳು ವೆಬ್ಸೈಟ್ ಮೂಲಕ ಫಲಿತಾಂಶವನ್ನು ನೋಡಬಹುದಾಗಿದೆ.

ಕಳೆದ ನವೆಂಬರ್ ನಲ್ಲಿ ಯುಜಿಸಿ ಎನ್ಇಟಿ ಪರೀಕ್ಷೆಗಳು ದೇಶಾದ್ಯಂತ ನಡೆದಿದ್ದವು, ಇದೀಗ ಪರೀಕ್ಷೆಯ ಸಂಪೂರ್ಣ ಫಲಿತಾಂಶ ಹೊರಬಿದ್ದಿದ್ದು, 9 ಲಕ್ಷಕ್ಕೂ ಹೆಚ್ಚಿನ ಅಭ್ಯರ್ಥಿಗಳು ಪರೀಕ್ಷೆಗೆ ತೆಗೆದುಕೊಂಡಿದ್ದು ಅದರಲ್ಲಿ 45737 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದರೆ.

ಯುಜಿಸಿ ಎನ್ಇಟಿ ಫಲಿತಾಂಶ ಪ್ರಕಟ

ಯುಜಿಸಿ ವೆಬ್ಸೈಟ್ ನಲ್ಲಿ ಫಲಿತಾಂಶ ಪ್ರಕಟಿಸಲಾಗಿದ್ದು, ಒಟ್ಟು 84 ವಿಷಯಗಳ ಪ್ರಶ್ನೆಪತ್ರಿಕೆಗಳಿಗೆ ಅಂತಿಮ ಕೀ ಉತ್ತರಗಳನ್ನು ಸಹ ಪ್ರಕಟಿಸಲಾಗಿದೆ.

ಫಲಿತಾಂಶ ನೋಡುವ ವಿಧಾನ

  • ಎನ್ಇಟಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
  • ಎಡಭಾಗದಲ್ಲಿ ಕಾಣುವ "Current Events CBSE-UGC NET RESULT - NOVEMBER 2017" ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಫಲಿತಾಂಶದ ಪಿಡಿಎಫ್ ಪುಟ ತೆರೆದುಕೊಳ್ಳುತ್ತದೆ
  • ನೋಂದಣಿ ಸಂಖ್ಯೆ ಮೂಲಕ ನೀವು ತೇರ್ಗಡೆಯಾಗಿದ್ದೀರಾ ಎನ್ನುವುದನ್ನು ಪರೀಕ್ಷಿಸಿಕೊಳ್ಳಿ.

ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ

ಎನ್ ಇ ಟಿ ಪರೀಕ್ಷೆ

ಸರ್ಕಾರಿ, ಅನುದಾನಿತ ಪದವಿ ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕರಾಗಲು ಅರ್ಹತಾ ಪರೀಕ್ಷೆ ಎನ್‌ಇಟಿ ಅಥವಾ ಎಸ್‌ಎಲ್‌ಇಟಿ ತೇರ್ಗಡೆಯಾಗಿರಬೇಕು.

ಕೇಂದ್ರ ಪ್ರೌಢಶಿಕ್ಷಣ ಮಂಡಳಿ (ಸಿಬಿಎಸ್‌ಇ) ಮೂಲಕ ವರ್ಷಕ್ಕೆ ಎರಡು ಬಾರಿ ಎನ್‌ಇಟಿ ನಡೆಯುತ್ತದೆ. ಅಲ್ಲದೆ ಕೆಲ ರಾಜ್ಯಗಳು ವರ್ಷ, ಎರಡು ವರ್ಷಕ್ಕೊಮ್ಮೆ ಎಸ್‌ಎಲ್‌ಇಟಿ (ಸ್ಲೆಟ್‌) ನಡೆಸುತ್ತವೆ.

ಎನ್ಇಟಿ ಪರೀಕ್ಷಾ ವಿಧಾನ

ಎನ್ಇಟಿ ಪರೀಕ್ಷೆಯು ಒಟ್ಟು ಮೂರು ಪತ್ರಿಕೆಗಳನ್ನು ಒಳಗೊಂಡಿದ್ದು 350 ಅಂಕಗಳಿಗೆ ನಡೆಸಲಾಗುವುದು.

  • ಮೊದಲ ಪತ್ರಿಕೆ 60 ಪ್ರಶ್ನೆಗಳನ್ನೊಳಗೊಂಡಿದ್ದು 50 ಪ್ರಶ್ನೆಗಳಿಗೆ ಅಭ್ಯರ್ಥಿಯು ಉತ್ತರಿಸಬೇಕಾಗುತ್ತದೆ. ಪ್ರತಿ ಪ್ರಶ್ನೆಗೆ ಎರಡು ಅಂಕಗಳನ್ನು ನಿಗದಿಪಡಿಸಲಾಗುತ್ತದೆ. ಈ ಪತ್ರಿಕೆಯು ಸಾಮಾನ್ಯ ಪತ್ರಿಕೆಯಾಗಿದ್ದು ಲಾಜಿಕ್, ರೀಸನಿಂಗ್, ಮೆಂಟಲ್ ಎಬಿಲಿಟಿ ಸೇರಿದಂತೆ ಹತ್ತು ವಿವಿಧ ವಿಷಯಗಳ ಬಗ್ಗೆ ಕೇಳಲಾಗುವುದು.
  • ಎರಡನೇ ಪತ್ರಿಕೆಯು 50 ಪ್ರಶ್ನೆಗಳನ್ನು ಒಳಗೊಂಡಿದ್ದು ಇದು ವಿಷಯಾಧರಿತ ಪತ್ರಿಕೆಯಾಗಿರುತ್ತದೆ.ಪ್ರತಿ ಪ್ರಶ್ನೆಗೆ ಎರಡು ಅಂಕಗಳನ್ನು ನಿಗದಿಪಡಿಸಲಾಗುತ್ತದೆ.
  • ಮೂರನೇ ಪತ್ರಿಕೆಯು 75 ಪ್ರಶ್ನೆಗಳನ್ನು ಒಳಗೊಂಡಿದ್ದು ಇದು ವಿಷಯಾಧರಿತ ಪತ್ರಿಕೆಯಾಗಿರುತ್ತದೆ.ಪ್ರತಿ ಪ್ರಶ್ನೆಗೆ ಎರಡು ಅಂಕಗಳನ್ನು ನಿಗದಿಪಡಿಸಲಾಗುತ್ತದೆ.
For Quick Alerts
ALLOW NOTIFICATIONS  
For Daily Alerts

English summary
UGC NET November 2017 Complete Result and Final Answer Keys have been released by the Central Board of Secondary Education, CBSE on its official website for National Eligibility Test (NET.)
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X