ಪದವಿ ಮತ್ತು ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ಪರೀಕ್ಷೆ ರದ್ದಾಗುವ ಸಾಧ್ಯತೆ

ಪ್ರಸಕ್ತ ಶೈಕ್ಷಣಿಕ ವರ್ಷದ ವಿಶ್ವವಿದ್ಯಾಲಯಗಳ ಹಾಗೂ ಕಾಲೇಜುಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ಪರೀಕ್ಷೆಯನ್ನು ರದ್ದುಪಡಿಸಲು ಯುಜಿಸಿ ಸಮಿತಿ ಶಿಫಾರಸು ಮಾಡಿರುವುದಾಗಿ ವರದಿಯೊಂದು ತಿಳಿದುಬಂದಿದೆ.

ಡಿಗ್ರಿ ಮತ್ತು ಪಜಿ ಪದವಿಯ ಅಂತಿಮ ವರ್ಷದ ಪರೀಕ್ಷೆಗಳು ರದ್ದು!

 

ದೇಶಾದ್ಯಂತ ಕೋವಿಡ್ 19 ಸೋಂಕು ಹಬ್ಬುತ್ತಿರುವ ಸಂದರ್ಭದಲ್ಲಿ ಯುಜಿಸಿ ವಿವಿಗಳ ಅಂತಿಮ ವರ್ಷದ ವಿದ್ಯಾರ್ಥಿಗಳ ಪರೀಕ್ಷೆ ನಡೆಸುವುದು ಸಮಂಜಸವಲ್ಲ ಎಂದು ವಿದ್ಯಾರ್ಥಿಗಳು ಮತ್ತು ಪೋಷಕರ ಸುರಕ್ಷತೆಯ ದೃಷ್ಟಿಯಿಂದ ಆತಂಕ ವ್ಯಕ್ತಪಡಿಸಿದ್ದು, ಈ ನಿಟ್ಟಿನಲ್ಲಿ ಪರೀಕ್ಷೆ ರದ್ದುಪಡಿಸುವ ಬಗ್ಗೆ ಯುಜಿಸಿ ಸಮಿತಿ ಶಿಫಾರಸು ಮಾಡುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.

ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಯುಜಿಸಿ ಈಗಾಗಲೇ ಪದವಿ ಕಾಲೇಜುಗಳ ಪ್ರಥಮ ಹಾಗೂ ದ್ವಿತೀಯ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನೇ ರದ್ದು ಮಾಡಿತ್ತು. ಆದರೆ ಅಂತಿಮ ವರ್ಷದ ಪದವಿ ಪರೀಕ್ಷೆಯನ್ನು ನಡೆಸುವುದಾಗಿ ಈ ಮುಂಚೆ ಹೇಳಿತ್ತು. ಆದರೆ ಈಗ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಪರೀಕ್ಷೆಗಳು ರದ್ದಾಗುವ ಸಾಧ್ಯತೆ ಹೆಚ್ಚಿದೆ. ಅದಲ್ಲದೆ ಸದ್ಯದ ಪರಿಸ್ಥಿತಿಯಲ್ಲಿ ಕಾಲೇಜುಗಳು ಆರಂಭವಾಗುವ ಸಾಧ್ಯತೆಯೂ ಕಡಿಮೆ ಇದೆ. ಹಾಗಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ಪರೀಕ್ಷೆಯನ್ನು ರದ್ದುಪಡಿಸಿ, ಹಿಂದಿನ ಸೆಮಿಸ್ಟರ್ ನಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ಫಲಿತಾಂಶ ಪ್ರಕಟಿಸಲು ಹರ್ಯಾಣ ಯೂನಿರ್ವಸಿಟಿ ಉಪ ಕುಲಪತಿ ಆರ್ ಸಿ ಕುಹಾದ್ ನೇತೃತ್ವದ ಯುಜಿಸಿ ಸಮಿತಿ ಶಿಫಾರಸು ಮಾಡಿರುವುದಾಗಿ ತಿಳಿದಿದೆ. ಆದರೆ ಈ ಬಗ್ಗೆ ಯುಜಿಸಿ ಅಧಿಕೃತವಾಗಿ ನಿರ್ಧಾರ ಪ್ರಕಟಿಸುವುದು ಬಾಕಿ ಉಳಿದಿದೆ ಎಂದು ವರದಿ ತಿಳಿಸಿದೆ.

ಕೋವಿಡ್ ಸಮಸ್ಯೆ ಹಿನ್ನೆಲೆಯಲ್ಲಿ ಈಗಾಗಲೇ ಮಹಾರಾಷ್ಟ್ರ, ಒಡಿಶಾ, ಮಧ್ಯಪ್ರದೇಶ ಮತ್ತು ಹರ್ಯಾಣ ರಾಜ್ಯಗಳಲ್ಲಿ ಎಲ್ಲಾ ವಿವಿಯ ಹಾಗೂ ಕಾಲೇಜುಗಳ ಪರೀಕ್ಷೆಗಳನ್ನು ರದ್ದು ಮಾಡಲು ಆದೇಶ ಹೊರಡಿಸಿತ್ತು. ಕೋವಿಡ್ ಭಯದಿಂದ ಪರೀಕ್ಷೆ ರದ್ದುಗೊಳಿಸುವಂತೆ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರು.

For Quick Alerts
ALLOW NOTIFICATIONS  
For Daily Alerts

English summary
UGC recomends government to cancel ug and pg exams due to covid 19 fear.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X