ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆರ್ಕಿಟೆಕ್ಚರ್ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ಅರ್ಹತೆಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ರವರು ನಡೆಸುವ NATA 2020ರಲ್ಲಿ ಅಥವಾ JEE Paper -2 2020ರಲ್ಲಿ ಅರ್ಹತೆಯನ್ನು ಪಡೆದು ಸಿಇಟಿ -2020ಕ್ಕೆ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 30,2020 ರಿಂದ ಅಕ್ಟೋಬರ್ 2,2020ರ ಸಂಜೆ 5:30ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಶುಲ್ಕವನ್ನು ಅಕ್ಟೋಬರ್ 3,2020ರೊಳಗಾಗಿ ಪಾವತಿಸಬೇಕಿರುತ್ತದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಆರ್ಕಿಟೆಕ್ಚರ್ ಕೋರ್ಸ್ ಗೆ ಪ್ರವೇಶ ಪಡೆಯಲು ಅರ್ಹತೆಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಅವಶ್ಯಕವಾಗಿರುತ್ತದೆ. ಮತ್ತೊಂದು ಬಾರಿ ಆನ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶ ನೀಡುವುದಿಲ್ಲ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ
For Daily Alerts