ಮುಂದಿನ ವರ್ಷದಿಂದ ನೀಟ್ ಪ್ರಶ್ನೆಪತ್ರಿಕೆಗಳಲ್ಲಿ ಏಕರೂಪತೆ

ಒಂದೇ ಮಾದರಿ ಪರೀಕ್ಷೆಯಂತೆ ಒಂದೇ ರೀತಿಯ ಪ್ರಶ್ನೆಗಳನ್ನು ಪರೀಕ್ಷೆಯಲ್ಲಿ ನೀಡಲು ತೀರ್ಮಾನಿಸಲಾಗಿದೆ. ಕೋಲ್ಕತ್ತಾದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಈ ವಿಷಯ ತಿಳಿಸಿದ್ದಾರೆ.

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ನಡೆಸುವ ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ಮಾರ್ಪಾಡು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಒಂದೇ ಮಾದರಿ ಪರೀಕ್ಷೆಯಂತೆ ಒಂದೇ ರೀತಿಯ ಪ್ರಶ್ನೆಗಳನ್ನು ಪರೀಕ್ಷೆಯಲ್ಲಿ ನೀಡಲು ತೀರ್ಮಾನಿಸಲಾಗಿದೆ. ಕೋಲ್ಕತ್ತಾದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ಈ ವಿಷಯ ತಿಳಿಸಿದ್ದಾರೆ.

ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿ ಇದ್ದ ಪ್ರಶ್ನೆಗಳಿಗಿಂತ ಪ್ರಾದೇಶಿಕ ಭಾಷೆಯಲ್ಲಿನ ಪ್ರಶ್ನೆ ಪತ್ರಿಕೆ ಕಠಿಣವಾಗಿತ್ತು ಎನ್ನುವ ಪಶ್ಚಿಮ ಬಂಗಾಳದ ಶಿಕ್ಷಣ ಸಚಿವರ ದೂರಿಗೆ ಪ್ರತಿಕ್ರಿಯಿಸಿದ ಸಚಿವರು ಮುಂದಿನ ವರ್ಷದಿಂದ ಎಲ್ಲ ಭಾಷೆಗಳ ಪ್ರಶ್ನೆಪತ್ರಿಕೆಗಳಲ್ಲಿ ಏಕರೂಪತೆ ತರುವುದಾಗಿ ಹೇಳಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆಗಳಲ್ಲಿ ಏಕರೂಪತೆ

ಇಂಗ್ಲಿಷ್ ಭಾಷೆಯ ಪ್ರಶ್ನೆಗಳನ್ನೇ ಇತರ ಪ್ರಾದೇಶಿಕ ಭಾಷೆಗಳಿಗೆ ಭಾಷಾಂತರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ವರ್ಷದ ನೀಟ್ ಪರೀಕ್ಷೆಯಲ್ಲಿ ಸಿಬಿಎಸ್ಇ ವಿವಿಧ ಭಾಷೆಯ ಪತ್ರಿಕೆಗಳಲ್ಲಿ ವಿವಿಧ ಪ್ರಶ್ನೆಗಳನ್ನು ನೀಡಿತ್ತು, ಇಂಗ್ಲಿಷ್ ಭಾಷೆಯ ಪ್ರಶ್ನೆಪತ್ರಿಕೆಗೂ ಪ್ರಾದೇಶಿಕ ಭಾಷೆಯ ಪ್ರಶ್ನೆಪತ್ರಿಕೆಗೂ ಸಾಕಷ್ಟು ವ್ಯತ್ಯಾಸಗಳಿತ್ತು.

ತಮಿಳು, ಗುಜರಾತಿ, ಬಂಗಾಳಿ ಸೇರಿದಂತೆ ಕೆಲವು ಪ್ರಾದೇಶಿಕ ಭಾಷೆ ಪತ್ರಿಕೆಗಳಿಗೂ, ಹಿಂದಿ ಭಾಷೆಯ ಪ್ರಶ್ನೆಗಳಿಗೂ ಭಿನ್ನತೆ ಇದೆ ಎಂದು ಆರೋಪಿಸಿ ತಮಿಳುನಾಡಿನ ವಿದ್ಯಾರ್ಥಿಗಳು ಮದ್ರಾಸ್ ಹೈಕೋರ್ಟ್ ತಡೆ ನೀಡಿತ್ತು. ಬಳಿಕ ಸುಪ್ರೀಂ ಕೋರ್ಟ್ ತಡೆಯನ್ನು ತೆರವುಗೊಳಿಸಿತ್ತು.

ಇತ್ತೀಚೆಗಷ್ಟೇ ತಮಿಳುವಾಡಿನ ಸಂಸದ ಎ.ನವನೀತ್ ಕೃಷ್ಣನ್ ರಾಜ್ಯಸಭೆಯಲ್ಲಿ ಉತ್ತರ ಭಾರತದ ವಿದ್ಯಾರ್ಥಿಗಳಿಗೆ ಸುಲಭವಾದ ಪ್ರಶ್ನೆಗಳನ್ನು ನೀಡಲಾಗಿತ್ತು, ತಮಿಳುನಾಡಿನ ವಿದ್ಯಾರ್ಥಿಗಳಿಗೆ ಕಷ್ಟಕರವಾದ ಪ್ರಶ್ನೆಗಳನ್ನು ಕೇಳಲಾಗಿತ್ತು ಎಂದು ಆರೋಪಿಸಿದ್ದರು. ಅಲ್ಲದೆ ನೀಟ್ ಪರೀಕ್ಷೆಯಿಂದ ತಮಿಳುನಾಡಿನ ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡಬೇಕೆಂದರು ವಾದಿಸಿದ್ದರು, ಸಂಸದ ನವನೀತ್ ಕೃಷ್ಣರ ಮಾತಿಗೆ ಸಭೆಯಲ್ಲಿ ಭಾಗವಹಿಸಿದ ಇತರರು ಕೂಡ ಬೆಂಬಲ ವ್ಯಕ್ತ ಪಡಿಸಿದ್ದರು.

For Quick Alerts
ALLOW NOTIFICATIONS  
For Daily Alerts

English summary
Union Human Resource Development minister Prakash Javadekar has said vernacular question papers for the NEET will be mere translation of the question paper in English.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X