Ramesh Pokhriyal Nishank Resigned : ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ರಾಜಿನಾಮೆ

ರಾಜಿನಾಮೆ ನೀಡಿದ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್

ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ಇಂದು ಮಧ್ಯಾಹ್ನ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸಂಪುಟ ಪುನರ್ ರಚನೆ/ವಿಸ್ತರಣೆಗೂ ಮುನ್ನವೇ ಪೋಖ್ರಿಯಾಲ್ ಅವರು ರಾಜೀನಾಮೆ ನೀಡಿದ್ದಾರೆ.

 

ಏಪ್ರಿಲ್ 21 ಪೊಖ್ರಿಯಾಲ್ ಅವರಿಗೆ ಕೋವಿಡ್ ಸೋಂಕು ಪಾಸಿಟಿವ್ ಬಂದಿತ್ತು. ಜೂನ್ ನಲ್ಲಿ ಮತ್ತೆ ಆರೋಗ್ಯದಲ್ಲಿ ಏರುಪೇರು ಆದ್ದರಿಂದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಶಿಕ್ಷಣ ಸಚಿವರಾಗಿ ರಮೇಶ್ ಪೋಖ್ರಿಯಲ್ ಅವರು ಜುಲೈ 6 ರಂದು ಮಹತ್ವದ ಪ್ರಕಟಣೆಯನ್ನು ಹೊರಡಿಸಿದ್ದರು. ಅವರ ಕೊನೆಯ ಪ್ರಮುಖ ಪ್ರಕಟಣೆಯಲ್ಲಿ ಜೆಇಇ ಮುಖ್ಯ ಪರೀಕ್ಷೆಯ ಹೊಸ ದಿನಾಂಕಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ವೈದ್ಯಕೀಯ ನೀಟ್ ಪರೀಕ್ಷೆಯ ದಿನಾಂಕಗಳನ್ನು ಅವರು ಅತೀ ಶೀಘ್ರದಲ್ಲೇ ಪ್ರಕಟಿಸಲಿದ್ದಾರೆ ಎಂದು ವಿದ್ಯಾರ್ಥಿಗಳು ನಿರೀಕ್ಷಿಸುತ್ತಿದ್ದರು.

ಕೇಂದ್ರ ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಭಾರತವು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಅಳವಡಿಸಿಕೊಂಡಿತು.

For Quick Alerts
ALLOW NOTIFICATIONS  
For Daily Alerts

English summary
Ramesh pokhriyal nishank, union minister for education, has resigned from his post.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X