Unlock 6.0 : ಶಾಲೆ, ಕಾಲೇಜು ಮತ್ತು ಶೈಕ್ಷಣಿಕ ಸಂಸ್ಥೆಗಳ ಆರಂಭ ಕುರಿತು ಹೊಸ ಮಾರ್ಗಸೂಚಿ

ಗೃಹ ಸಚಿವಾಲಯವು ಶಾಲೆ, ಕಾಲೇಜು ಮತ್ತು ಶೈಕ್ಷಣಿಕ ಸಂಸ್ಥೆಗಳ ಆರಂಭದ ಕುರಿತು ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಅನ್‌ಲಾಕ್ 5.0 ಚಾಲ್ತಿಯಲ್ಲಿದ್ದು, ನವೆಂಬರ್ ತಿಂಗಳಿನಲ್ಲೂ ಇದೇ ಮುಂದುವರೆಯುವ ಸಾಧ್ಯತೆಗಳಿರುತ್ತದೆ ಹಾಗೂ ನವೆಂಬರ್ ತಿಂಗಳಿನಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಸಾಧ್ಯತೆಗಳಿವೆ. ಇನ್ನು ಕಂಟೈನ್ಮೆಂಟ್ ವಲಯಗಳಲ್ಲಿ ಕಟ್ಟುನಿಟ್ಟಾಗಿ ಲಾಕ್‌ಡೌನ್ ಮುಂದುವರೆಯಲಿದೆ ಎಂದು ತಿಳಿಸಿದೆ.

ಅನ್‌ಲಾಕ್ 6.0: ಶಾಲೆ ಕಾಲೇಜು ಮತ್ತು ಶೈಕ್ಷಣಿಕ ಸಂಸ್ಥೆಗಳ ಆರಂಭದ ಕುರಿತು ಮಾಹಿತಿ

1) ಶಾಲೆಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳನ್ನು ಪುನಃ ತೆರೆಯುವುದಕ್ಕೆ ಸಂಬಂಧಿಸಿದಂತೆ ತರಗತಿಗಳನ್ನು ಪುನರಾರಂಭಿಸಬೇಕೇ ಅಥವಾ ಬೇಡವೇ ಎಂಬ ನಿರ್ಧಾರವನ್ನು ತೆಗೆದುಕೊಳ್ಳಲು ರಾಜ್ಯಗಳು ಮತ್ತು ವಿಶ್ವವಿದ್ಯಾಲಯಗಳಿಗೆ ಬಿಡಲಾಗಿದೆ.

2) ಕೊರೋನಾ ಹರಡುವಿಕೆಯನ್ನು ನಿಯಂತ್ರಿಸುವ ಹಿನ್ನೆಲೆಯಲ್ಲಿ ಆನ್‌ಲೈನ್ ಕಲಿಕೆಯನ್ನು ಪ್ರೋತ್ಸಾಹಿಸಲಾಗಿದೆ. ವಿದ್ಯಾರ್ಥಿಗಳು ಶಾಲೆಗೆ ಹೋಗುವ ಬದಲು ದೂರಶಿಕ್ಷಣದ ಮೂಲಕ ಕಲಿಕೆ ಮುಂದುವರಿಸುವಂತೆ ಹೇಳಿದೆ.

3) ಆದಾಗ್ಯೂ ಒಬ್ಬ ವಿದ್ಯಾರ್ಥಿಯು ಶಾಲೆಗೆ ಹೋಗಲು ಬಯಸಿದರೆ, ಪೋಷಕರು ಅಥವಾ ಪಾಲಕರ ಲಿಖಿತ ಒಪ್ಪಿಗೆ ಕಡ್ಡಾಯವಾಗಿರುತ್ತದೆ.

4) ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಎಸ್‌ಒಪಿಗಳನ್ನು ಕೇಂದ್ರದ ಅನ್ಲಾಕ್ 5 ಮಾರ್ಗಸೂಚಿಗಳಿಗೆ ಅನುಗುಣವಾಗಿ ಮತ್ತು ಆಯಾ ಘಟಕಗಳಲ್ಲಿನ ನೆಲದ ಪರಿಸ್ಥಿತಿಗೆ ಅನುಗುಣವಾಗಿ ಸಿದ್ಧಪಡಿಸುವ ಅಗತ್ಯವಿದೆ.

5) ಉನ್ನತ ಶಿಕ್ಷಣ ಸಂಸ್ಥೆಗಳು, ವಿಜ್ಞಾನ ಮತ್ತು ತಂತ್ರಜ್ಞಾನದ ವಿಷಯಗಳಲ್ಲಿ ಅಧ್ಯಯನ ಮಾಡುತ್ತಿರುವ ಪಿಜಿ ಮತ್ತು ಪಿಹೆಚ್.ಡಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅಥವಾ ಲ್ಯಾಬ್ ವರ್ಕ್ ಮಾಡಲು ಅವಕಾಶ ನೀಡಬಹುದು ಎಂದು ಹೇಳಿದೆ.

6) ಹಾಜರಾತಿ ಸಂಪೂರ್ಣವಾಗಿ ಪೋಷಕರ ಒಪ್ಪಿಗೆಯ ಮೇಲೆ ಅವಲಂಬಿತವಾಗಿರುತ್ತದೆ ಮತ್ತು ಇದಕ್ಕೆ ಸಂಬಂಧಿಸಿದಂತೆ ಶಾಲೆಗಳಿಂದ ಯಾವುದೇ ರೀತಿಯ ಕಡ್ಡಾಯ ನಿಯಮವಿರುವುದಿಲ್ಲ.

7) ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಸಾಮಾಜಿಕ ಅಂತರದಲ್ಲಿ ಕೂರಿಸುವಂತೆ, ವಿದ್ಯಾರ್ಥಿಗಳು ಶಾಲೆಗೆ ಬರುವ ಮತ್ತು ತೆರಳುವ ಸಮಯಗಳಲ್ಲಿ ಅಗತ್ಯ ವೇಳಾಪಟ್ಟಿಯನ್ನು ರಚಿಸಿಕೊಳ್ಳುವಂತೆ ಹೇಳಿದೆ.

8) ಶಾಲೆಗಳಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು ಮತ್ತು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕಡ್ಡಾಯವಾಗಿ ಎಲ್ಲಾ ಸಮಯದಲ್ಲೂ ಫೇಸ್ ಮಾಸ್ಕ್ ಧರಿಸಬೇಕು.

9) ಶಾಲೆಯ ಆವರಣ ಸಂಪೂರ್ಣವಾಗಿ ಶುಚಿಗೊಳಿಸುವಿಕೆ, ಶುದ್ಧೀಕರಣ, ವಿದ್ಯಾರ್ಥಿಗಳಿಗೆ ಕೈ ತೊಳೆಯುವ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಆಸನ ಯೋಜನೆ, ಸುರಕ್ಷಿತ ಸಾರಿಗೆ ಯೋಜನೆ, ಅಗತ್ಯ ಸಮಯದ ವೇಳಾಪಟ್ಟಿ, ವಿದ್ಯಾರ್ಥಿಗಳು ಶಾಲೆಗೆ ಬರುವ ಮತ್ತು ತೆರಳುವ ಸಮಯಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಕಡ್ಡಾಯವಾಗಿ ಶಾಲೆಗಳಿಗೆ ಸೂಚಿಸಲಾಗಿದೆ.

For Quick Alerts
ALLOW NOTIFICATIONS  
For Daily Alerts

English summary
Unlock 6.0: Here is latest guidelines for schools, colleges and educational institutions.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X