UPSC 2019: ಐಎಫ್‌ಎಸ್ ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್

ಕೇಂದ್ರ ಲೋಕ ಸೇವಾ ಅಯೋಗ (ಯುಪಿಎಸ್‌ಸಿ) 2019 ನೇ ಸಾಲಿನ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಪ್ರಮುಖ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟಗೊಂಡಿದೆ. ಆಯೋಗದ ವೆಬ್‌ಸೈಟ್‌ನಲ್ಲಿ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಯುಪಿಎಸ್‌ಸಿ: ಐಎಫ್‌ಎಸ್ ಪ್ರಮುಖ  ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಯುಪಿಎಸ್‌ಸಿ ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪ್ರಮುಖ ಪರೀಕ್ಷೆಗೆ ಹಾಜರಾಗಲು ಅರ್ಹರಾಗಿದ್ದು,ಪ್ರಮುಖ ಪರೀಕ್ಷೆಯು ಇದೇ ಡಿಸೆಂಬರ್ 1 ರಿಂದ 8ರ ವರೆಗೆ ನಡೆಯಲಿದೆ. ಅಭ್ಯರ್ಥಿಗಳಿಗೆ ಡಿಸೆಂಬರ್ 8,2019ರ ವರೆಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ.

ಪ್ರವೇಶ ಪತ್ರ ಪಡೆಯುವ ವಿಧಾನ:

ಸ್ಟೆಪ್ 1: ಯುಪಿಎಸ್‌ಸಿ ಅಧಿಕೃತ ವೆಬ್‌ಸೈಟ್‌ https://www.upsc.gov.in/ ಗೆ ಭೇಟಿ ನೀಡಿ

ಸ್ಟೆಪ್ 2: ಹೋಂ ಪೇಜ್‌ನ ಬಲಭಾಗದಲ್ಲಿ ಕಾಣುವ e-admit card: Indian forest service main examination,2019 ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ click here ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ನಂತರ ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ To Download e-Admit Card ಕೆಳಗೆ ಇರುವ click here ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 5: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರೋಲ್ ನಂಬರ್ ಮತ್ತು ರಿಜಿಸ್ಟ್ರೇಶನ್ ಐಡಿ ನೀಡಿ ಲಾಗಿನ್ ಆಗಿ ನಿಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ಮುಖ್ಯ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕಿರುತ್ತದೆ. ಪ್ರಮುಖ ಪರೀಕ್ಷೆ ಯಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಮುಂದಿನ ಹಂತವಾಗಿ ಸಂದರ್ಶನ ಇರಲಿದ್ದು, ಸಂದರ್ಶನದ ವೇಳಾಪಟ್ಟಿಯನ್ನು ವೆಬ್‌ಸೈಟ್‌ ನಲ್ಲಿ ಪ್ರಕಟಿಸಲಾಗುತ್ತದೆ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
UPSC 2019 release IFS main exam admit card in official website. Candidates can download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X