UPSC 2020: ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ ಪರೀಕ್ಷೆ (I) ಪ್ರವೇಶ ಪತ್ರ ರಿಲೀಸ್

ಕೇಂದ್ರ ಲೋಕಾ ಸೇವಾ ಆಯೋಗವು ಇದೀಗ ಕಂಬೈನ್ಡ್ ಡಿಫೆನ್ಸ್ ಸರ್ವೀಸ್ ಪರೀಕ್ಷೆ (I) ಯ ಪ್ರವೇಶ ಪತ್ರ ರಿಲೀಸ್ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಯುಪಿಎಸ್‌ಸಿ  ಸಿಡಿಎಸ್ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಯುಪಿಎಸ್‌ಸಿ ಒಟ್ಟು 418 ಹುದ್ದೆಗಳಿಗೆ ನವೆಂಬರ್ 19,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಯುಪಿಎಸ್‌ಸಿ ಸಿಡಿಎಸ್ (I) ಪರೀಕ್ಷೆಯು ಫೆಬ್ರವರಿ 2,2020 ರಂದು ನಡೆಯಲಿದ್ದು, ಪರೀಕ್ಷಾ ಫಲಿತಾಂಶವು ಮಾರ್ಚ್ ತಿಂಗಳಲ್ಲಿ ಬಿಡುಗಡೆಗೊಳ್ಳಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.

ಯುಪಿಎಸ್‌ಸಿ ಸಿಡಿಎಸ್‌ Iರ ಪ್ರವೇಶ ಪತ್ರವನ್ನು ಪಡೆಯಲು ಈ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "e-Admit Card : Combined Defence Services Examination (I), 2020" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ Link ನ ಕೆಳಗಿರುವ Click Here ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಅಥವಾ ರೋಲ್ ನಂಬರ್ ನೀಡಿ ಲಾಗಿನ್ ಆಗಿ

ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ
ಸ್ಟೆಪ್ 6:ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
UPSC CDS Exam I 2020 released admit card in official website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X