UPSC CDS (I) Admit Card 2022 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಇಲ್ಲಿ ತಿಳಿಯಿರಿ

ಕೇಂದ್ರ ಲೋಕಾಸೇವಾ ಆಯೋಗವು ಕಂಬೈನ್ಡ್ ಡಿಫೆನ್ಸ್ ಸರ್ವೀಸ್ ಪರೀಕ್ಷೆ (I) ಯ ಪ್ರವೇಶ ಪತ್ರವನ್ನು ರಿಲೀಸ್ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಯುಪಿಎಸ್‌ಸಿ ಸಿಡಿಎಸ್ (I) ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಯುಪಿಎಸ್‌ಸಿ ಒಟ್ಟು 341 ಹುದ್ದೆಗಳ ನೇಮಕಾತಿಗಾಗಿ ಜನವರಿ 11,2022ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಕನಿಷ್ಟ 20 ರಿಂದ ಗರಿಷ್ಟ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆಯನ್ನು ಭಾರತದೆಲ್ಲೆಡೆ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಏಪ್ರಿಲ್ 10,2022ರಂದು ನಿಗದಿಪಡಿಸಲಾಗಿದ್ದು, ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಯುಪಿಎಸ್‌ಸಿ ಸಿಡಿಎಸ್‌ I ಪರೀಕ್ಷೆಯ ಪ್ರವೇಶ ಪತ್ರವನ್ನು ಪಡೆಯಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "e-Admit Card : Combined Defence Services Examination (I), 2022" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ Link ನ ಕೆಳಗಿರುವ Click Here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಅಥವಾ ರೋಲ್ ನಂಬರ್ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ
ಸ್ಟೆಪ್ 6:ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC CDS (I) admit card 2022 released in official website. How to download read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+