
ಕೇಂದ್ರ ಲೋಕಾ ಸೇವಾ ಆಯೋಗವು ಇದೀಗ ಕಂಬೈನ್ಡ್ ಡಿಫೆನ್ಸ್ ಸರ್ವೀಸ್ ಪರೀಕ್ಷೆ (II) ಯ ಪ್ರವೇಶ ಪತ್ರವನ್ನು ರಿಲೀಸ್ ಮಾಡಲಾಗಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಯುಪಿಎಸ್‌ಸಿ ಒಟ್ಟು 339 ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 24,2021ರ ಸಂಜೆ 6 ಗಂಟೆಯೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆಯನ್ನು ಭಾರತದೆಲ್ಲೆಡೆ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನವೆಂಬರ್ 14,2021ರಂದು ನಡೆಸಲಾಗುತ್ತಿದೆ. ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಯುಪಿಎಸ್‌ಸಿ ಸಿಡಿಎಸ್ IIರ ಪ್ರವೇಶ ಪತ್ರವನ್ನು ಪಡೆಯಲು ಈ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್ https://upsc.gov.in/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "e-Admit Card : Combined Defence Services Examination (II), 2021" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ Link ನ ಕೆಳಗಿರುವ Click Here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಅಥವಾ ರೋಲ್ ನಂಬರ್ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ
ಸ್ಟೆಪ್ 6:ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ.
ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.
ಅಭ್ಯರ್ಥಿಗಳು ಅಧಿಕೃತ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











