ಕೇಂದ್ರ ಲೋಕಾಸೇವಾ ಆಯೋಗವು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ II ಲಿಖಿತ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ವೀಕ್ಷಿಸಬಹುದು.

ಯುಪಿಎಸ್ಸಿ ಒಟ್ಟು 339 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಆಗಸ್ಟ್ 4,2021 ರಿಂದ ಆಗಸ್ಟ್ 24,2021ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಲಿಖಿತ ಪರೀಕ್ಷೆಯನ್ನು ನವೆಂಬರ್ 14,2021ರಂದು ನಡೆಸಲಾಗಿತ್ತು. ಇದೀಗ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಯುಪಿಎಸ್ಸಿ ಸಿಡಿಎಸ್ II ಪರೀಕ್ಷೆಯ ಫಲಿತಾಂಶ ಚೆಕ್ ಮಾಡುವುದು ಹೇಗೆ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಕೇಂದ್ರ ಲೋಕ ಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "Written Result: UPSC CDS II, 2021" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿಲ್ಲಿ ಅಲ್ಲಿ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.
ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











