UPSC CGS prelims Admit Card 2022 : ಯುಪಿಎಸ್ಸಿ ಸಿಜಿಎಸ್ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ರಿಲೀಸ್

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಕಂಬೈನ್ಡ್ ಜಿಯೋಸೈಂಟಿಸ್ಟ್ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಿಲಿಮಿನರಿ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಯುಪಿಎಸ್ಸಿ ಕಂಬೈನ್ಡ್ ಜಿಯೋ-ಸೈಂಟಿಸ್ಟ್ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಯುಪಿಎಸ್‌ಸಿ ಕಂಬೈನ್ಡ್ ಜಿಯೋಸೈಂಟಿಸ್ಟ್ ಪರೀಕ್ಷೆ 2021ರ ಬಗ್ಗೆ ಸೆಪ್ಟೆಂಬರ್ 22,2021ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಒಟ್ಟು 192 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅಕ್ಟೋಬರ್ 12,2021ರ ಸಂಜೆ 6 ಗಂಟೆಯೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಪ್ರಮುಖ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಪ್ರಿಲಿಮಿನರಿ ಪರೀಕ್ಷೆಯನ್ನು ಫೆಬ್ರವರಿ 20,2022ರಂದು ನಡೆಸಲು ನಿಗದಿಪಡಿಸಲಾಗಿದೆ. ಪ್ರಿಲಿಮಿನರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಮತ್ತು ಸಂದರ್ಶನಕ್ಕೆ ಹಾಜರಾಗಲು ಅಹರಾಗಿರುತ್ತಾರೆ. ಇದೀಗ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟಿಸಲಾಗಿದ್ದು, ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಯುಪಿಎಸ್‌ಸಿ ಕಂಬೈನ್ಡ್ ಜಿಯೋಸೈಂಟಿಸ್ಟ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1: ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "e-Admit Card : Combined Geo Scientist (prelims) Examination, 2022" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ Link ನ ಕೆಳಗಿರುವ Click Here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಪಾಸ್‌ವರ್ಡ್‌ / ಜನ್ಮದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ
ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಯುಪಿಎಸ್ಸಿ ಸಂಯೋಜಿತ ಭೂ-ವಿಜ್ಞಾನಿ ನೇಮಕಾತಿ 2021ರ ಮೂಲಕ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜಿಯೋಲಜಿಕಲ್ ಸೈನ್ಸ್/ಜಿಯೋಲಜಿ/ಅನ್ವಯಿಕ ಭೂವಿಜ್ಞಾನ ಇತ್ಯಾದಿಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು; ಭೌತಶಾಸ್ತ್ರದಲ್ಲಿ ಎಂ.ಎಸ್ಸಿ/ಅಪ್ಲೈಡ್ ಫಿಸಿಕ್ಸ್/ಎಂ.ಎಸ್ಸಿ. (ಜಿಯೋಫಿಸಿಕ್ಸ್) ಇತ್ಯಾದಿ; ರಸಾಯನಶಾಸ್ತ್ರ/ಅಪ್ಲೈಡ್ ಕೆಮಿಸ್ಟ್ರಿ/ವಿಶ್ಲೇಷಣಾತ್ಮಕ ರಸಾಯನಶಾಸ್ತ್ರ ಮತ್ತು ಭೂವಿಜ್ಞಾನ/ಭೂವಿಜ್ಞಾನ/ಸಾಗರ ಭೂವಿಜ್ಞಾನ ಅಥವಾ ಜಲವಿಜ್ಞಾನದಲ್ಲಿ ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.

ಯುಪಿಎಸ್‌ಸಿ ಸಂಯೋಜಿತ ಜಿಯೋ-ಸೈಂಟಿಸ್ಟ್ ನೇಮಕಾತಿ 2021 ಮೂಲಕ ಯುಪಿಎಸ್‌ಸಿ ಕಂಬೈನ್ಡ್ ಜಿಯೋ-ಸೈಂಟಿಸ್ಟ್ ಪರೀಕ್ಷೆ 2021ಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 21 ವರ್ಷಗಳನ್ನು ಪೂರೈಸಿದವರಾಗಿರಬೇಕು ಮತ್ತು ಜನವರಿ 1,2022ರ ವೇಳೆಗೆ 32 ವರ್ಷಗಳನ್ನು ಮೀರಿರದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಅಧಿಸೂಚನೆಯಲ್ಲಿ ತಿಳಿಸಿರುವಂತೆ 3 ವರ್ಷಗಳು (OBC) ಮತ್ತು 5 ವರ್ಷಗಳು (SC/ST) ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ಅಭ್ಯರ್ಥಿಗಳು ಯುಪಿಎಸ್‌ಸಿ ಸಿಜಿಎಸ್ ಪ್ರಿಲಿಮಿನರಿ ಪರೀಕ್ಷಾ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
UPSC released prelims exam admit card 2022 for CGS exam. Candidates can download their admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+