
ಕೇಂದ್ರ ಲೋಕಸೇವಾ ಆಯೋಗವು ನಾಗರಿಕ ಸೇವೆ ಹುದ್ದೆಗಳ ಪ್ರಮುಖ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಿದೆ. ಪ್ರಮುಖ ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.
ಯುಪಿಎಸ್ಸಿ ಸಿವಿಲ್ ಸರ್ವೀಸಸ್ ಮುಖ್ಯ ಪರೀಕ್ಷೆಯನ್ನು ಜನವರಿ 8,2021 ರಿಂದ ಜನವರಿ 17,2021ರ ವರೆಗೆ ನಡೆಸಲಾಗಿತ್ತು. ಇದೀಗ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.
ಯುಪಿಎಸ್ಸಿ ಸಿವಿಲ್ ಸರ್ವೀಸಸ್ ಪ್ರಮುಖ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ?:
ಸ್ಟೆಪ್ 1: ಕೇಂದ್ರ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ನೀಡಲಾಗಿರುವ "UPSC Civil Services (Main) Examination, 2020" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಿಮ್ಮ ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.
ಅಭ್ಯರ್ಥಿಗಳು ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


Click it and Unblock the Notifications











