ಕೇಂದ್ರ ಲೋಕಸೇವಾ ಆಯೋಗವು ನಾಗರಿಕ ಸೇವೆ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಯುಪಿಎಸ್ಸಿ ಸಿವಿಲ್ ಸರ್ವೀಸಸ್ ಪರೀಕ್ಷೆಯು ಅಕ್ಟೋಬರ್ 4,2020 ರಂದು ನಡೆಯಲಿದೆ. ಕಳೆದ ಮೇ ತಿಂಗಳಿನಲ್ಲಿ ನಡೆಯಬೇಕಿದ್ದ ಪರೀಕ್ಷೆಯು ಕೊರೋನಾ ಕಾರಣದಿಂದಾಗಿ ಮುಂದೂಡಲಾಗಿತ್ತು. ಇದೀಗ ಅಕ್ಟೋಬರ್ ನಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಈಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಯುಪಿಎಸ್ಸಿ ಸಿವಿಲ್ ಸರ್ವೀಸಸ್ ಪ್ರಿಲಿಮಿನರಿ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ?:
ಸ್ಟೆಪ್ 1: ಕೇಂದ್ರ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ https://www.upsc.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಅಲ್ಲಿ ನೀಡಲಾಗಿರುವ "UPSC Civil Services Prelims 2020 Admit Card" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಹೊಸ ಪುಟಕ್ಕೆ ಹೋಗುವಿರಿ ಅಲ್ಲಿ ಅರ್ಜಿ ಸಂಖ್ಯೆ ಮತ್ತು ಇತರೆ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ಎಲ್ಲವೂ ಪೂರ್ಣಗೊಂಡ ಬಳಿಕ ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಮೂಡುವುದು
ಸ್ಟೆಪ್ 6: ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಾಗ ಪ್ರವೇಶ ಪತ್ರದ ಜೊತೆಗೆ ಅಗತ್ಯ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು.


Click it and Unblock the Notifications











