ಕೇಂದ್ರ ಲೋಕ ಸೇವಾ ಆಯೋಗವು ಸಿವಿಲ್ ಸರ್ವೀಸ್ ಪ್ರಿಲಿಮಿನರಿ ಪರೀಕ್ಷೆಯನ್ನು ಮುಂದೂಡಿದೆ. ದೇಶದಾದ್ಯಂತ ಕೊರೋನಾ ಭೀತಿ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಯುಪಿಎಸ್ಸಿ ಸಿವಿಲ್ ಸರ್ವೀಸಸ್ ಪ್ರಿಲಿಮಿನರಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಯುಪಿಎಸ್ಸಿ ಮೇ.31 ರಂದು ಪ್ರಿಲಿಮಿನರಿ ಪರೀಕ್ಷೆಯನ್ನು ನಡೆಸುವುದಾಗಿ ತಿಳಿಸಿತ್ತು. ಆದರೆ ಕೋವಿಡ್-19ನಿಂದಾಗಿ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರೀಕ್ಷಾ ದಿನಾಂಕವನ್ನು ಲಾಕ್‌ಡೌನ್ ಮುಗಿದ ಬಳಿಕ ತಿಳಿಸಲಾಗುವುದು ಎಂದು ಹೇಳಿದೆ.
ಈಗಾಗಲೆ ದೇಶದಾದ್ಯಂತ ಕೊರೋನಾ ಸಮಸ್ಯೆಯಿಂದಾಗಿ ಸುರಕ್ಷತೆಯ ದೃಷ್ಟಿಯಿಂದ ಎಸ್‌ಎಸ್‌ಎಲ್‌ಸಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಲಾಕ್‌ಡೌನ್ ಮುಗಿದ ಬಳಿಕವೇ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಲಾಗುವುದು. ಅಭ್ಯರ್ಥಿಗಳು ಆಗಾಗ ಅಧಿಕೃತ ವೆಬ್‌ಸೈಟ್ ಅನ್ನು ಪರಿಶೀಲಿಸುತ್ತಿರತಕ್ಕದ್ದು.
For Daily Alerts