UPSC CMS Admit card 2021 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಕೇಂದ್ರ ಲೋಕ ಸೇವಾ ಆಯೋಗ ಕಂಬೈನ್ಡ್ ಮೆಡಿಕಲ್ ಸರ್ವೀಸಸ್ ಪರೀಕ್ಷೆ 2021ರ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಯನ್ನು ಬರೆಯಲಿರುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಯುಪಿಎಸ್ಸಿ ಸಿಎಂಎಸ್ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಯುಪಿಎಸ್‌ಸಿ ಕಂಬೈನ್ಡ್ ಮೆಡಿಕಲ್ ಸರ್ವೀಸಸ್ ಪರೀಕ್ಷೆ 2021ರ ಬಗ್ಗೆ ಜುಲೈ 7,2021ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಒಟ್ಟು ೮೩೮ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಜುಲೈ 27,2021ರ ಸಂಜೆ 6 ಗಂಟೆಯೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಪರೀಕ್ಷೆಯನ್ನು ನವೆಂಬರ್ 21,2021ರಂದು ನಡೆಸಲು ನಿಗದಿಪಡಿಸಲಾಗಿದೆ. ಪ್ರವೇಶ ಪತ್ರ ಬಿಡುಗಡೆಯಾಗಿದ್ದು, ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಯುಪಿಎಸ್‌ಸಿ ಸಿಎಂಎಸ್ ಪರೀಕ್ಷಾ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "e-Admit Card : Combined Medical Services Examination, 2021" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ Link ನ ಕೆಳಗಿರುವ Click Here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಪಾಸ್‌ವರ್ಡ್‌ / ಜನ್ಮದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ
ಸ್ಟೆಪ್ 6: ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
UPSC released Combined medical services examination 2021 admit card in upsc website. Here is how to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X